ಬೆಂಗಳೂರು(ಸೆ.22) : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ಹಾಗೂ ಮುಂಗಾರಿನ ಪ್ರಭಾವದಿಂದ ರಾಜ್ಯದಲ್ಲಿ ಕಳೆದ 2 ವಾರಗಳಿಗೂ ಹೆಚ್ಚು ಕಾಲದಿಂದ ಭಾರೀ ಮಳೆಯಾಗುತಿತ್ತು,ಆದರೆ ಕೆಲ ದಿನಗಳಿಂದ ಕೊಚ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರ ತನಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೇಶದಲ್ಲಿ ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ 27% ಹೆಚ್ಚು ಮಳೆಯಾಗಲಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಮಳೆ ಹೆಚ್ಚಾಗಲು ಕಾರಣವಾಗಿದೆ, ಇದರಿಂದಾಗಿ ಸಾಮಾನ್ಯವಾಗಿ ಸೆಪ್ಟೆಂಬರ್ 17ರಿಂದ ಕಡಿಮೆಯಾಗಬೇಕಿದ್ದ ಮಳೆ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಧ್ಯ ಮುಂಗಾರು ಈಗ ಜೈಸಲ್ಮೇರ್, ಕೋಟ, ಗುಣ, ಸತ್ನಾ, ಜಮ್ಶೆಡ್ಪುರನ ಕಡಿಮೆ ಒತ್ತಡದ ಕೇಂದ್ರ ನಂತರ ಆಗ್ನೇಯ ವಾರ್ಡ್ಗಳ ಮೂಲಕ ಈಶಾನ್ಯ ಮಧ್ಯ ಬಂಗಾಳ ಕೊಲ್ಲಿಗೆ ಹಾದು ಹೋಗುತ್ತಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆ ಅರ್ಭಟ ಹೆಚ್ಚಾಗುವ ಸಾಧ್ಯತೆ ಇದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ.
ಕಳೆದ ಹಲವು ದಿನಗಳಿಂದ ಉಷ್ಣಾಂಶ ಹೆಚ್ಚಿದ್ದ, ಬೆಂಗಳೂರು ನಗರದಲ್ಲಿ ಮಂಗಳವಾರ ಮಧ್ಯಾಹ್ನ, ಸಂಜೆಯೂ ಮಳೆಯಾಗಿದ್ದು, ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಕೊಡಗು, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆ ಆಗುವ ನಿರೀಕ್ಷೆ ಇದೆ.
ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಆದರೆ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಿತ್ತು. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಡಿಕೆಗಿಂತ ಹೆಚ್ಚು ಮಳೆ ಸೆಪ್ಟೆಂಬರ್ ತಿಂಗಳಿನಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜುಲೈ ತಿಂಗಳಿನಲ್ಲಿ ಉತ್ತಮ ಮಳೆಯಾಗಿತ್ತು. ಜುಲೈಗೆ ಹೋಲಿಕೆ ಮಾಡಿದರೆ ಆಗಸ್ಟ್ನಲ್ಲಿ ಮಳೆಯ ಪ್ರಮಾಣ ಕಡಿಮೆ ಇತ್ತು. ಆದರೆ ಸೆಪ್ಟೆಂಬರ್ನಲ್ಲಿ ವಾಯುಭಾರ ಕುಸಿತದಿಂದಾಗಿ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.