Publish Date: Mon, 11 Apr 2022 (08:47 IST)
Updated Date: Mon, 11 Apr 2022 (08:49 IST)
ಬೆಂಗಳೂರು : ಹುಬ್ಬಳ್ಳಿ-ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಸಿದ್ಯಾವನೂರು ಗ್ರಾಮದಲ್ಲಿ ಭಾರೀ ಮಳೆ ಲಕ್ಷಾಂತರ ರೂಪಾಯಿ ಮೌಲ್ಯದ 14 ಕುರಿ, ಒಂದು ಕುದುರೆ ಸಾವನ್ನಪ್ಪಿದೆ.
ಹಾವೇರಿ ಜಿಲ್ಲೆಯ ಕಾಗಿನೆಲೆ, ಮುಳಥಳ್ಳಿ, ತಡಸ ಸೇರಿ ಹಲವೆಡೆ ಭಾರೀ ಮಳೆಯಾಗಿದೆ. ತಡಸ ಗ್ರಾಮದಲ್ಲಿ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ.
ವಿಜಯಪುರದ ಬಬಲೇಶ್ವರ ತಾಲೂಕಿನ ಯಕ್ಕುಂಡಿ ಗ್ರಾಮ ಸೇರಿದಂತೆ ಹಲವೆಡೆ ಆಲಿಕಲ್ಲು ಮಳೆಯಾಗಿದೆ.