Select Your Language

Notifications

webdunia
webdunia
webdunia
webdunia

ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ

ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ
ನವದೆಹಲಿ , ಗುರುವಾರ, 1 ಜೂನ್ 2023 (11:06 IST)
ನವದೆಹಲಿ : ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆ ಪರಿಷ್ಕರಿಸಿದ ನಂತರ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ ಕಂಡಿದೆ.
 

19 ಕೆಜಿ ತೂಕದ ಸಿಲಿಂಡರ್ ಬೆಲೆ 83.50 ರೂ. ಇಳಿಕೆಯಾಗಿದ್ದು, ದೆಹಲಿಯಲ್ಲಿ 1,773 ರೂ.ಗೆ ಮಾರಾಟವಾಗುತ್ತಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. 

ಕಳೆದ ತಿಂಗಳು ಮೇ 1 ರಂದು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 171.50 ರೂ. ಕಡಿತಗೊಳಿಸಲಾಗಿತ್ತು. ಅದಕ್ಕೂ ಮುನ್ನ ಏಪ್ರಿಲ್ನಲ್ಲಿ 91.50 ರೂ. ಕಡಿತಗೊಳಿಸಲಾಗಿತ್ತು. ಆದರೆ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ತೂಕದ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ಗಳ ದರ ಕಳೆದ ತಿಂಗಳಿನಂತೆಯೇ ಇದೆ. 


Share this Story:

Follow Webdunia kannada

ಮುಂದಿನ ಸುದ್ದಿ

ದಾಖಲೆಯಲ್ಲಿ ಲಿಂಗ ಬದಲಾವಣೆ ಅರ್ಜಿಗೆ ಕೋರ್ಟ್ ಹೇಳಿದ್ದೇನು?