Select Your Language

Notifications

webdunia
webdunia
webdunia
webdunia

ಇನ್ಮುಂದೆ ಕರ್ನಾಟಕಕ್ಕೂ ಚಂದ್ರನಿಗೂ ನೇರ ಸಂಪರ್ಕ

ಇನ್ಮುಂದೆ ಕರ್ನಾಟಕಕ್ಕೂ ಚಂದ್ರನಿಗೂ ನೇರ ಸಂಪರ್ಕ
ಬೆಂಗಳೂರು , ಗುರುವಾರ, 24 ಆಗಸ್ಟ್ 2023 (09:51 IST)
ಬೆಂಗಳೂರು : ಇಸ್ರೋದ ಕೇಂದ್ರ ಕಚೇರಿ ಇರುವ ಬೆಂಗಳೂರು ಚಂದ್ರಯಾನ -3ರ ಯಶಸ್ಸಿನಲ್ಲಿ ಮಹತ್ವದ ಪಾತ್ರ ನಿರ್ವಹಿಸಿದೆ.
 
ರಾಕೆಟ್, ನೌಕೆಯ ಅಭಿವೃದ್ಧಿಯಿಂದ ಶುರುವಾಗಿ ಅದರ ಸಂಪೂರ್ಣ ನಿರ್ವಹಣೆ ಹಾಗೂ ಬಾಹ್ಯಾಕಾಶದಲ್ಲಿ ನೌಕೆಯ ಮೇಲೆ ಕಣ್ಗಾವಲಿರಿಸಿರುವುದು ಪೀಣ್ಯದಲ್ಲಿರುವ ಇಸ್ಟ್ರಾಕ್ನಿಂದ. ಈ ಕೇಂದ್ರವು ರಾಕೆಟ್ ಉಡ್ಡಯನದಿಂದ ಉಪಗ್ರಹ ಕಕ್ಷೆಗೆ ಸೇರಿಸುವುದು ಸೇರಿದಂತೆ ಅದರ ಜೀವಿತಾವಧಿಯ ಟ್ರ್ಯಾಕಿಂಗ್ ಮಾಡುತ್ತದೆ.

ಈ ಮೂಲಕ ಉಪಗ್ರಹಕ್ಕೆ ಕಮಾಂಡ್ ಮಾಡುತ್ತದೆ.ಮೋಕ್ಸ್ ಕೇಂದ್ರ ಉಡ್ಡಯನದ ಎಲ್ಲಾ ಮಾಪನಾಂಕಗಳ ಮೇಲೆ ನಿರಂತರವಾಗಿ ನಿಗಾ ಇಡುವ ಮೂಲಕ ಅವುಗಳು ಸರಿಯಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು ದಾಖಲಿಸುತ್ತದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ : ಚಂದ್ರಯಾನ ಯಶಸ್ಸಿಗೆ ರಾಹುಲ್ ಶ್ಲಾಘನೆ