Select Your Language

Notifications

webdunia
webdunia
webdunia
webdunia

ಇನ್ಮುಂದೆ ಕ್ಲಬ್, ಪಬ್ನಲ್ಲಿ ಮಹಿಳಾ ಸಿಬ್ಬಂದಿ ಕಡ್ಡಾಯ

ಹೊಸ ವರ್ಷಾಚರಣೆ
ಬೆಂಗಳೂರು , ಭಾನುವಾರ, 18 ಡಿಸೆಂಬರ್ 2022 (06:24 IST)
ಬೆಂಗಳೂರು : ನ್ಯೂ ಇಯರ್ ವೆಲ್ಕಮ್ಗೆ ಬೆಂಗಳೂರು ಪೊಲೀಸ್ ಸರ್ಪಗಾವಲಿನಲ್ಲಿ ಇರಲಿದೆ. ಈಗಾಗಲೇ ತಯಾರಿ ಶುರುವಾಗಿದ್ದು, ಕ್ಲಬ್ -ಪಬ್ಗಳೂ ಸಹ ತಯಾರಿ ನಡೆಸಿವೆ.

ಹಾಗಾಗಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಸ್ಪೆಷಲ್ ಪಿಂಕ್ಸ್ಕ್ವಾಡ್ ಫೀಲ್ಡಿಗಿಳಿದಿದೆ. ಮಹಿಳಾ ಪೊಲೀಸರನ್ನು ವಿವಿಧ ತಂಡಗಳಾಗಿ ಮಾಡಿ ಫೀಲ್ಡ್ಗೆ ಇಳಿಸಲು ಅಧಿಕಾರಿಗಳು ತಯಾರಿ ನಡೆಸಿದ್ದಾರೆ.

ಆ ಮೂಲಕ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರೋಡ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪೊಲೀಸರ ನಿಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದು ಸಾವಿರಕ್ಕೂ ಹೆಚ್ಚು ಮಹಿಳಾ ಪೊಲೀಸರನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. 

ಆಯಕಟ್ಟಿನ ಜಾಗಗಳಲ್ಲಿ ಹೆಚ್ಚುವರಿ ಸಿಸಿಟಿವಿ, 50 ಬಾಡಿ ಕ್ಯಾಮೆರಾ  ಹಾಕಲು ತೀರ್ಮಾನಿಸಲಾಗಿದೆ. ಕ್ಲಬ್ ಮತ್ತು ಪಬ್ ನಲ್ಲಿ ಮಹಿಳಾ ಸಿಬ್ಬಂದಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಸಂಬಂಧಪಟ್ಟ ಕ್ಲಬ್ನವರೇ ಲೇಡಿ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಬೇಕು.

ಪ್ರತಿಯೊಂದು ಕ್ಲಬ್ ಮತ್ತು ಪಬ್, ಹೋಟೆಲ್ ಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಕ್ಲಬ್ ನವರೇ ಮಹಿಳಾ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಬೇಕು. ಯಾವ ಕ್ಲಬ್ ಮತ್ತು ಪಬ್ನಲ್ಲಿ ಎಷ್ಟು ಸಿಬ್ಬಂದಿ ನೇಮಕ ಮಾಡಿಕೊಂಡಿದ್ದಾರೆ ಅನ್ನೋ ಮಾಹಿತಿಯನ್ನ ವ್ಯಾಪ್ತಿಯ ಪೊಲೀಸ್ ಠಾಣೆಗೆ ನೀಡಬೇಕು ಎಂದು ಸೂಚಿಸಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಡಿಸಿಪಿ ವಿರುದ್ಧ ದಯಾಮರಣ ಕೋರಿ ರಾಷ್ಟ್ರಪತಿಗೆ ಬರೆದ ಪತ್ರ ಎಲ್ಲಡೆ ವೈರಲ್