ಬೆಂಗಳೂರು : ಶುಕ್ರವಾರ ರಾಜ್ಯಾದ್ಯಂತ ನಡೆಯಲಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ ನೀಡಿದೆ. ಮೂರು ವಾರಗಳ ಕಾಲ ಮುಷ್ಕರ ನಡೆಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಪರೀಕ್ಷೆಗಳು ನಡೆಯುತ್ತಿರುವಾಗ ಮುಷ್ಕರದಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ ಎಂದು ಹೈಕೋರ್ಟ್ ಉಲ್ಲೇಖಿಸಿದೆ.
ಮುಷ್ಕರ ಕಾನೂನು ಬಾಹಿರ ಎಂದು ಎಚ್ ಎಂ.ವೆಂಕಟೇಶ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆಗೆ ನೋಟಿಸ್ ನೀಡಿ ಮುಷ್ಕರ ತಡೆಗೆ ಆದೇಶಿಸಿದೆ.
ಮಾ.20 ರಂದು ಕಾರ್ಮಿಕ ಇಲಾಖೆ ಆಯುಕ್ತರು ಸಭೆ ಕರೆದಿದ್ದರು ಆದರೆ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಹೈಕೋರ್ಟ್ ಗೆ ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ ಮಾಹಿತಿ ನೀಡಿದ್ದಾರೆ.