Select Your Language

Notifications

webdunia
webdunia
webdunia
webdunia

ಸರ್ಕಾರದ ಸಮನ್ವಯ ಸೂತ್ರಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಸರ್ಕಾರದ ಸಮನ್ವಯ ಸೂತ್ರಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು , ಶನಿವಾರ, 24 ಸೆಪ್ಟಂಬರ್ 2022 (08:00 IST)
ಬೆಂಗಳೂರು : ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರದ ಸಮನ್ವಯ ಸೂತ್ರಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಈ ಮೂಲಕ ಬಿಕ್ಕಟ್ಟು ಶಮನಗೊಂಡಿದೆ.
 
ಹೈಕೋರ್ಟ್ ಗ್ರೀನ್ ಸಿಗ್ನಲ್ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಿದೆ. ಸೆಪ್ಟೆಂಬರ್ 29ಕ್ಕೆ ಸಿಇಟಿ ಪರಿಷ್ಕೃತ ರಾಂಕಿಂಗ್ ಪಟ್ಟಿ ಕೆಇಎ ಬಿಡುಗಡೆ ಮಾಡಲಿದೆ.

ಅಕ್ಟೋಬರ್ 3 ರಿಂದ ಮೊದಲ ಹಂತದ ಸೀಟು ಹಂಚಿಕೆ ಪ್ರಕ್ರಿಯೆ ಪ್ರಾರಂಭ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವ ಅಶ್ವಥ್ನಾರಾಯಣ್  ತಿಳಿಸಿದ್ದಾರೆ.   ಪುನಾರಾವರ್ತಿತರ 2021ನೇ ಸಾಲಿನ ಪಿಯುಸಿ ಅಂಕಗಳನ್ನು 2022ನೇ ಸಾಲಿನ ಸಿಇಟಿಗೆ ಪರಿಗಣಿಸುವ ವಿಚಾರದಲ್ಲಿ ಸಮಸ್ಯೆಯಾಗಿತ್ತು.

ಈ ಕುರಿತು ಸಿಇಟಿ ರ್ಯಾಂಕಿಂಗ್ನಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕ ಪರಿಗಣಿಸಲ್ಲವೆಂದು ಸರ್ಕಾರ ಜುಲೈ 30 ರಂದು ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಪುನರಾವರ್ತಿತ ವಿದ್ಯಾರ್ಥಿಗಳು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕವನ್ನು ಪರಿಗಣಿಸುವಂತೆ ಆದೇಶ ನೀಡಿತ್ತು. 

 

Share this Story:

Follow Webdunia kannada

ಮುಂದಿನ ಸುದ್ದಿ

ತಾಲೂಕಿನಾದ್ಯಂತ 4 ದಿನ ಹೆಚ್ಚುವರಿ ರಜೆ