ಬೆಂಗಳೂರು : ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.
ನೇಮಕಾತಿ ಮಾಡುವಾಗ ಕೆಲವೊಂದು ಕಾನೂನು ಬಾಹಿರ ಚಟುವಟಿಕೆಗಳನ್ನು ತೆಗೆದುಕೊಂಡಿದ್ದಾರೆ ಎಂದು ನೂರಾರು ಅಭ್ಯರ್ಥಿಗಳು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ನ್ಯಾ.ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಸರ್ಕಾರದ ಕ್ರಮ ಸರಿಯಾಗಿಲ್ಲವೆಂದು ಶಿಕ್ಷಣ ಇಲಾಖೆಯ ಆಯ್ಕೆಪಟ್ಟಿ ರದ್ದುಪಡಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣಿಸಿ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.