Publish Date: Sun, 06 Mar 2022 (07:34 IST)
Updated Date: Sun, 06 Mar 2022 (09:37 IST)
ಬೆಂಗಳೂರು : ರಸ್ತೆ ಗುಂಡಿ ವಿಚಾರವಾಗಿ ಬಿಬಿಎಂಪಿ ಮತ್ತೊಮ್ಮೆ ಹೈಕೋರ್ಟ್ ಸಿಟ್ಟಿಗೆ ಗುರಿಯಾಗಿದೆ.
ಬಿಬಿಎಂಪಿ ಇಂಜಿನಿಯರ್ಗಳನ್ನೇ ಬದಲಿಸಲು ಸರ್ಕಾರಕ್ಕೆ ಸೂಚಿಸುತ್ತೇವೆ ಅಂತ ನ್ಯಾಯಪೀಠ ಎಚ್ಚರಿಕೆ ನೀಡಿದೆ.
ಸಾವಿರಾರು ಕೋಟಿ ನೀಡಿದರೂ ರಸ್ತೆ ಸರಿಯಾಗುತ್ತಿಲ್ಲ. ಜನ ಬಲಿಯಾಗೋದು ಕಡಿಮೆಯಾಗುತ್ತಿಲ್ಲ ಎಂದು ಹೇಳಿ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಹೈಕೋರ್ಟ್ ಎಚ್ಚರಿಕೆಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ರಸ್ತೆ ಗುಣಮಟ್ಟದಲ್ಲಿ ರಾಜಿ ಆಗುವುದಿಲ್ಲ. ಹೈಕೋರ್ಟ್ ಆದೇಶ ಪಾಲಿಸ್ತೇವೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಮಾರ್ಚ್ 15 ರೊಳಗೆ ವರದಿ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ.