Publish Date: Mon, 23 Jan 2023 (12:21 IST)
Updated Date: Mon, 23 Jan 2023 (12:30 IST)
ನವದೆಹಲಿ: ಹಿಜಬ್ ಪ್ರಕರಣದ ವಿಚಾರಣೆಯನ್ನು ಶೀಘ್ರದಲ್ಲಿ ತ್ರಿಸದಸ್ಯ ಪೀಠದಲ್ಲಿ ಆರಂಭಿಸಲಾಗುವುದು. ಅದಕ್ಕೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಭರವಸೆ ನೀಡಿದ್ದಾರೆ.
ಪ್ರಕರಣದ ವಿಚಾರಣೆಯನ್ನು ಶೀಘ್ರ ಆರಂಭಿಸುವಂತೆ ವಿದ್ಯಾರ್ಥಿನಿಯರ ಪರ ವಕೀಲೆ ಮೀನಾಕ್ಷಿ ಅರೋರಾ ಮನವಿ ಮಾಡಿದ ಹಿನ್ನೆಲೆ ಸಿಜೆಐ ಈ ಭರವಸೆ ನೀಡಿದ್ದಾರೆ. ಇಂದು ಕಲಾಪ ಆರಂಭವಾಗುತ್ತಿದ್ದಂತೆ ಈ ಬಗ್ಗೆ ಕೋರ್ಟ್ ಗಮನಕ್ಕೆ ತರಲಾಯಿತು.