Publish Date: Thu, 10 Feb 2022 (14:21 IST)
Updated Date: Thu, 10 Feb 2022 (17:22 IST)
ಬೆಂಗಳೂರು : ಕಾಲೇಜುಗಳಿಗೆ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರಗಳನ್ನು ಧರಿಸಿ ಹೋಗುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ ಪ್ರಕಟಿಸಿದೆ.
ಕಾಲೇಜುಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಒಳಗೊಂಡ ತ್ರಿಸದ್ಯ ಪೀಠದಲ್ಲಿ ನಡೆಯಿತು.
ಮುಂದಿನ ಆದೇಶ ಬರುವವರೆಗೂ ಕಾಲೇಜಿಗೆ ಯಾರೂ ಸಹ ಹಿಜಬ್ ಮತ್ತು ಕೇಸರಿ ಶಾಲನ್ನು ಧರಿಸಿ ಹೋಗುವಂತಿಲ್ಲ. ಕಾಲೇಜು ನಡೆಯಲೇಬೇಕು. ಹೀಗಾಗಿ ಮಧ್ಯಂತರ ಆದೇಶ ನೀಡಿದ್ದೇವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಸಾಂವಿಧಾನತ್ಮಕ ಪ್ರಶ್ನೆಗಳು ಎದ್ದಿರುವ ಕಾರಣ ವಿಚಾರಣೆಯನ್ನು ಗಂಭೀರವಾಗಿ ನಡೆಸಲಾಗುವುದು ಎಂದು ಹೇಳಿರುವ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.