ಬೆಂಗಳೂರು : ಹಿಜಬ್ ಪ್ರಕರಣದ ಅರ್ಜಿ ಕರ್ನಾಟಕ ಹೈಕೋರ್ಟ್‌ನ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ.
ಉಡುಪಿ ವಿದ್ಯಾರ್ಥಿಗಳು ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ ನ್ಯಾ. ಕೃಷ್ಣ ದೀಕ್ಷಿತ್ ಅವರಿದ್ದ ಪೀಠದಲ್ಲಿ ನಡೆಯುತ್ತಿತ್ತು.
ಆ ಅರ್ಜಿಗಳು ಕೂಡ ವಿಭಾಗೀಯ ಪೀಠಕ್ಕೆ ವಿಚಾರಣೆಗೆ ಬರುತ್ತಿವೆ ಎಂದು ನ್ಯಾ. ಕೃಷ್ಣ ದೀಕ್ಷಿತ್ ಹೇಳಿದರು.
ಕೊನೆಗೆ ಈ ಪ್ರಕರಣದ ವಿಚಾರಣೆ ದೀರ್ಘವಾಗಿರುವ ಕಾರಣ ಯಾವುದೇ ಮಧ್ಯಂತರ ಆದೇಶ ನೀಡುವುದಿಲ್ಲ. ಮುಖ್ಯ ನಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು.