Publish Date: Thu, 13 Oct 2022 (12:04 IST)
Updated Date: Thu, 13 Oct 2022 (12:07 IST)
ನವದೆಹಲಿ: ಜಗತ್ತಿನಾದ್ಯಂತ ಸದ್ದು ಮಾಡಿದ್ದ ಕರ್ನಾಟಕದ ಹಿಜಬ್ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ಪ್ರಕಟಿಸಲಿದೆ.
ಶಾಲೆ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಮೂರು ವಾರಗಳ ಹಿಂದೆ ತೀರ್ಪನ್ನು ಕಾಯ್ದಿರಿಸಿತ್ತು.
ನ್ಯಾಯಮೂರ್ತಿ ಹೇಮಂತ್ ಗುಪ್ತಾ ಇದೇ 16ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಪ್ರೀಂಕೋರ್ಟ್ ಹಿಜಬ್ ವಿವಾದ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಲಿದೆ.
ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಿಸಿದ ರಾಜ್ಯ ಸರ್ಕಾರದ ನಿರ್ಧಾರ ಸರಿಯೋ? ತಪ್ಪೋ? ಎಂಬುದನ್ನು ಪ್ರಕಟಿಸಲಿದೆ.