Select Your Language

Notifications

webdunia
webdunia
webdunia
webdunia

ಹಿಜಬ್ ತೀರ್ಪು: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಹಿಜಬ್ ತೀರ್ಪು: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಶಿವಮೊಗ್ಗ , ಮಂಗಳವಾರ, 15 ಮಾರ್ಚ್ 2022 (08:28 IST)
ಶಿವಮೊಗ್ಗ: ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಿ ಎಂದು ಉಡುಪಿ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿಗಳು ಆದೇಶ ಕೊಟ್ಟಿದ್ದಾರೆ.

ಹೈಕೋರ್ಟ್ನಲ್ಲಿ ಹಿಜಬ್ ತೀರ್ಪು ವಿಚಾರ ನಾಳೆ ಬಹಿರಂಗವಾಗಲಿದೆ. ಈ ಹಿನ್ನೆಲೆ ಶಾಲೆ-ಕಾಲೇಜುಗಳಲ್ಲಿ ಗಲಾಟೆಯಾಗುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಇಂದು ಸಂಜೆ ಈ ಆದೇಶವನ್ನು ಹೊರಡಿಸಿದ್ದಾರೆ. 

ಶಿವಮೊಗ್ಗದಲ್ಲಿಯೂ ಹಿಜಬ್ ಭಾರೀ ಸದ್ದು ಮಾಡಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಅದರ ಜೊತೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಹೈಕೋರ್ಟ್ ನೀಡುವ ತೀರ್ಪಿಗೆ ಜನರು ಬದ್ಧರಾಗಿದ್ದು, ಕಾನೂನು ಕೈಗೆತ್ತಿಕೊಳ್ಳದೆ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು. ಯಾವುದೇ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶವಿದೆ. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕಿಯನ್ನ ಚಾಕುವಿನಿಂದ ಶಾಲಾ ಆವರಣದಲ್ಲಿಇರತ ! ಮುಂದೇನಾಯ್ತು?