Webdunia - Bharat's app for daily news and videos

Install App

ಪರೀಕ್ಷೆಗೂ ಹಿಜಬ್ ನಿಷೇಧದ ಕರಿನೆರಳು

Webdunia
ಬುಧವಾರ, 25 ಮೇ 2022 (13:39 IST)
ಬೆಂಗಳೂರು : ಎಸ್ಎಸ್ಎಲ್ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆ ಬಳಿಕ ಸಿಇಟಿ ಪರೀಕ್ಷೆಗೂ ಹಿಜಬ್ಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ.

ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು, ಎಸ್ಎಸ್ಎಲ್ಸಿ ಮತ್ತು ದ್ವೀತಿಯ ಪಿಯುಸಿಗೆ ಅನ್ವಯವಾಗುವ ನಿಯಮಗಳೇ ಸಿಇಟಿ ಪರೀಕ್ಷೆಗೂ ಅನ್ವಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಜೂನ್ 16, 17 ಹಾಗೂ 18 ರಂದು ಈ ವರ್ಷದ ಸಿಇಟಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹಿಜಬ್ ವಿಚಾರದಲ್ಲಿ ಹೈಕೋರ್ಟ್ ಆದೇಶ ಪಾಲನೆ ಮಾಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಈ ಹಿನ್ನಲೆಯಲ್ಲಿ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಿಜಬ್ ಸೇರಿದಂತೆ ಧಾರ್ಮಿಕ ಭಾವನೆಗಳ ಉಡುಪುಗಳನ್ನು ಧರಿಸದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ. 

ಸಿಇಟಿ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಲವು ನಿಯಮಗಳನ್ನು ಜಾರಿ ಮಾಡಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ನಿಯಮ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದೆ.

ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಿಜಬ್ ಧರಿಸುವಂತಿಲ್ಲ. ಹಿಜಬ್ ಅಲ್ಲದೇ ಕೇಸರಿ ಶಾಲು ಸೇರಿದಂತೆ ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ವಸ್ತ್ರಗಳನ್ನು ವಿದ್ಯಾರ್ಥಿಗಳು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರಗಳಿಗೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments