Daily Horoscope

Select Your Language

Notifications

webdunia
webdunia
webdunia
webdunia

ಇಂದಿನಿಂದ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಸಹಿತ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆ.

ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಪದವಿ ಶಿಕ್ಷಣ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.25ರ ಮಂಗಳವಾರ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು.

ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೀಘ್ರವೇ ದ್ವಿಚಕ್ರ, ತ್ರಿಚಕ್ರ ಸೇರಿ ಕೆಲ ವಾಹನಗಳಿಗೆ ನಿಷೇಧ!