Webdunia - Bharat's app for daily news and videos

Install App

ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Webdunia
ಬುಧವಾರ, 26 ಜುಲೈ 2023 (08:53 IST)
ಮಂಗಳೂರು  :  ಕರ್ನಾಟಕದಲ್ಲಿ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹಾಗೇ ಮುಂದಿನ 24 ಗಂಟೆಗಳಲ್ಲಿ ಸಹ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ                                                                    ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಹೀಗಾಗಿ ಇಂದು (ಜುಲೈ 26) ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಹಾಗಾದ್ರೆ, ಯಾವೆಲ್ಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಸಲಾಗಿದೆ .

ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಕಾರಣ ಮುನ್ನೆಚ್ಚರಿಕೆ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ, ಶಾಲಾ ಮತ್ತು ಕಾಲೇಜುಗಳಿಗೆ ಕಳೆದ ಮೂರು ದಿನಗಳಿಂದ ರಜೆ ನೀಡಲಾಗಿದೆ.

ಇಂದು ಸಹ ರಜೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಖಾಸಗಿ ವಿದ್ಯಾಸಂಸ್ಥೆಗಳಿಗೂ ರಜೆ ಘೋಷಿಸಿದ್ದು, ಕಾಲೇಜಿಗೆ ಬರಲಾಗದ ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ನಡೆಸುವಂತೆ ಸೂಚನೆ ನೀಡಿದ್ದಾರೆ. ಇದರ ಜೊತೆಗೆ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವಂತೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments