ನವದೆಹಲಿ : ದೇಶದಲ್ಲಿ ಕೋವಿಡ್ ಮೂರನೇ ಅಲೆ ವ್ಯಾಪಕವಾಗಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮತ್ತಷ್ಟು ಬಿಗಿ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.
ವಿದೇಶಗಳಿಂದ ಭಾರತಕ್ಕೆ ಪ್ರಯಾಣ ಬೆಳೆಸುವವರಿಗೆ ಒಂದು ವಾರ ಹೋಂ ಕ್ವಾರಂಟೈನ್ ಕಡ್ಡಾಯ. ಅಲ್ಲದೇ ಕ್ವಾರಂಟೈನ್ ಆದ 6ನೇ ದಿನಕ್ಕೆ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.
ಅತ್ಯಂತ ಅಪಾಯದ ದೇಶಗಳ ಪಟ್ಟಿ 19ಕ್ಕೆ ಏರಿದೆ. ಡಿಸೆಂಬರ್ ತಿಂಗಳಲ್ಲೇ ಈ ಪಟ್ಟಿಗೆ 9 ದೇಶಗಳು ಸೇರಿಕೊಂಡಿವೆ. ಈ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಬಿಗಿ ನಿಯಮಗಳನ್ನು ರೂಪಿಸಲಾಗಿದೆ.
ಹೊರದೇಶಗಳಿಂದ ಬಂದ ಪ್ರಯಾಣಿಕರು ಕಡ್ಡಾಯವಾಗಿ 7 ದಿನ ಹೋಂ ಕ್ವಾರಂಟೈನ್ ಆಗಬೇಕು.