Publish Date: Sat, 24 Dec 2022 (10:31 IST)
Updated Date: Sat, 24 Dec 2022 (10:26 IST)
ಕೇಂದ್ರ ಆರೋಗ್ಯ ಸಚಿವಾಲಯದ ಗುರುವಾರದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ 185 ಹೊಸ ಪ್ರಕರಣಗಳು ದೃಢಪಟ್ಟರೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,402 ಕ್ಕೆ ಇಳಿದಿದೆ.
ದೇಶದಲ್ಲಿ ಇಲ್ಲಿಯವರೆಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ (4,46,76,515) ದಾಖಲಾಗಿದೆ. ಒಟ್ಟು 5,30,681 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,41,42,432 ಕ್ಕೆ ಏರಿದೆ. ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ. ಸಚಿವಾಲಯದ ವೆಬ್ಸೈಟ್ ಪ್ರಕಾರ, ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇಲ್ಲಿಯವರೆಗೆ ದೇಶದಲ್ಲಿ 220.03 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.