Select Your Language

Notifications

webdunia
webdunia
webdunia
webdunia

ವಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು ಏರಿಕೆ?!

ವಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು ಏರಿಕೆ?!
ನವದೆಹಲಿ , ಬುಧವಾರ, 30 ಮಾರ್ಚ್ 2022 (12:26 IST)
ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಸತತ ಏರಿಕೆ ಕಂಡು ಬರುತ್ತಿದ್ದು, ಮಂಗಳವಾರ ಮತ್ತೆ ಪೆಟ್ರೋಲ್ ಬೆಲೆ ಪ್ರತಿ ಲೀಟರಿಗೆ 80 ಪೈಸೆ ಹಾಗೂ ಡೀಸೆಲ್ ಬೆಲೆ 70 ಪೈಸೆಯಷ್ಟುಏರಿಕೆಯಾಗಿದೆ.

ಇದರಿಂದಾಗಿ ಕಳೆದ ಒಂದೇ ವಾರದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ 4.80 ರು. ತುಟ್ಟಿಯಾದಂತಾಗಿದೆ. ಈ ಮೂಲಕ ದೆಹಲಿ ಹಾಗೂ ಹಲವಾರು ರಾಜ್ಯಗಳ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ 100ರ ಗಡಿಯನ್ನು ದಾಟಿದೆ.

ಮಾಚ್ರ್ 22 ರಿಂದ ಈವರೆಗೆ ಒಟ್ಟು 7 ಬಾರಿ ಇಂಧನದ ಬೆಲೆಯನ್ನು ಪರಿಷ್ಕರಿಸಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರಿಗೆ 100.21 ರು.ಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ 91.47 ರು. ಆಗಿದೆ.

ಅದೇ ಮುಂಬೈಯಲ್ಲಿ ಪೆಟ್ರೋಲ್ ಬೆಲೆ 115.04 ರು. ಹಾಗೂ ಡೀಸೆಲ್ ಬೆಲೆ 99.25 ರಷ್ಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 105.62 ರು ಹಾಗೂ 89.70ಕ್ಕೆ ಏರಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂಧನ ಬೆಲೆ ಏರಿಕೆಗೆ ಉತ್ತರ ಕೊಟ್ಟ ನಿರ್ಮಲಾ ಸೀತಾರಾಮನ್?