Publish Date: Wed, 09 Mar 2022 (08:44 IST)
Updated Date: Wed, 09 Mar 2022 (09:27 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಇಂದು ಕೇವಲ 197 ಮಂದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ.
ಹಾಗೆಯೇ 8 ಮಂದಿ ಕೊರೊನಾದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಇಂದು 258 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇಂದಿನ ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 130, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 7, ದಕ್ಷಿಣ ಕನ್ನಡ 3, ದಾವಣಗೆರೆ 2, ಧಾರವಾಡ 0, ಗದಗ 6,
ಹಾಸನ 2, ಹಾವೇರಿ 0, ಕಲಬುರಗಿ 1, ಕೊಡಗು 1, ಕೋಲಾರ 1, ಕೊಪ್ಪಳ 1, ಮಂಡ್ಯ 2, ಮೈಸೂರು 9, ರಾಯಚೂರು 1,ರಾಮನಗರ 0, ಶಿವಮೊಗ್ಗ 4, ತುಮಕೂರು 9, ಉಡುಪಿ 2, ಉತ್ತರ ಕನ್ನಡ 2, ವಿಜಯಪುರ 0, ಯಾದಗಿರಿಯಲ್ಲಿ 1 ಪ್ರಕರಣ ವರದಿಯಾಗಿದೆ.