ತಿರುಪತಿ ದೇವಸ್ಥಾನದ ಆದಾಯ ಎಷ್ಟು ಗೊತ್ತ?

Webdunia
ಶುಕ್ರವಾರ, 18 ಫೆಬ್ರವರಿ 2022 (11:41 IST)
ಅಮರಾವತಿ : ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ಆಂಧ್ರಪ್ರದೇಶದ ತಿರುಪತಿಯಲ್ಲಿರುವ ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಗುರುವಾರ ತನ್ನ 2022-23ನೇ ಸಾಲಿನ ಬಜೆಟ್ ಮಂಡಿಸಿದೆ.
 
ತಿರುಮಲದ ಪುರಾತನ ವೆಂಕಟೇಶ್ವರ ದೇವಾಲಯದ ಆಡಳಿತ ಮಂಡಳಿ 2022-23ರ ವಾರ್ಷಿಕ ಬಜೆಟ್ನಲ್ಲಿ 3,096.40 ಕೋಟಿ ರೂ. ಆದಾಯವನ್ನು ಅಂದಾಜಿಸಿದೆ.

ಮುಂದಿನ 12 ತಿಂಗಳ ಹಣಕಾಸು ಯೋಜನೆಯನ್ನು ಬಜೆಟ್ ಸಭೆಯಲ್ಲಿ ಪರಿಶೀಲಿಸಿದ ಬಳಿಕ ಟಿಟಿಡಿ ಮಂಡಳಿಯ ಅಧ್ಯಕ್ಷ ವೈ.ವಿ. ಸುಬ್ಬಾ ರೆಡ್ಡಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್. ಜವಾಹರ ರೆಡ್ಡಿ ವಾರ್ಷಿಕ ಬಜೆಟ್ ಬಗ್ಗೆ ಮಾಧ್ಯಮಕ್ಕೆ ತಿಳಿಸಿದ್ದಾರೆ.

ದೇವಾಲಯದ ವಾರ್ಷಿಕ ಆದಾಯದಲ್ಲಿ ಸುಮಾರು 1,000 ಕೋಟಿ ರೂ. ಹುಂಡಿಯಲ್ಲಿ (ದಾನ-ಪಾತ್ರೆ) ಭಕ್ತರಿಂದ ಬರುತ್ತದೆ ಎಂದು ಅಂದಾಜಿಸಲಾಗಿದೆ. ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್ಗಳಲ್ಲಿನ ಠೇವಣಿ ಮೇಲಿನ ಬಡ್ಡಿ ಸುಮಾರು 668.5 ಕೋಟಿ ರೂ., ವಿವಿಧ ರೀತಿಯ ಟಿಕೆಟ್ಗಳ ಮಾರಾಟದಿಂದ 362 ಕೋಟಿ ರೂ. ಸಂಗ್ರಹವಾಗಬಹುದು ಎಂದು ಅಂದಾಜಿಸಲಾಗಿದೆ.

ಲಡ್ಡು ಪ್ರಸಾದ ಮಾರಾಟದಿಂದ 365 ಕೋಟಿ ರೂ., ವಸತಿ ಹಾಗೂ ಮದುವೆ ಮಂಟಪದ ಬಾಡಿಗೆಯಿಂದ 95 ಕೋಟಿ ರೂ., ಭಕ್ತರು ಅರ್ಪಿಸುವ ಕೂದಲು ಮಾರಾಟದಿಂದ 126 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಮಂಡಳಿಯ ವಿವಿಧ ಸೇವೆಗಳ ವೆಚ್ಚವನ್ನು 1,360 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಪಕ್ಷದ ನಾಯಕರೇ ನಿಮ್ಮ ಬ್ರ್ಯಾಂಡ್ ಬೆಂಗಳೂರು ನಂಬಲ್ಲ: ಆರ್ ಅಶೋಕ್ ಲೇವಡಿ

ಕಮರ್ಷಿಯಲ್ ಸಿಲಿಂಡರ್ ಕೊರತೆ: ಬೆಂಗಳೂರಿನಲ್ಲೂ ಹೋಟೆಲ್ ಬಂದ್ ಆಗುವ ಭೀತಿ

ಕಾಂಗ್ರೆಸ್ ಶಾಸಕರಿಗೆ ಇಂದು ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ

ಹಿರಿಯ ಸಂಸದ ನಮಸ್ಕಾರ ಮಾಡಿದರೂ ಜೇಬಿನೊಳಗಿನಿಂದ ಕೈ ತೆಗೆಯದ ರಾಹುಲ್ ಗಾಂಧಿ: ಬಿಜೆಪಿ ಟೀಕೆ Video

Karnataka Weather: ರಾಜ್ಯದಲ್ಲಿ ಇಂದೂ ಒಣಹವೆ ಮುಂದುವರಿಕೆ

ಮುಂದಿನ ಸುದ್ದಿ
Show comments