ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,550 ಆಗಿದ್ದರೆ ಚೆನ್ನೈಯಲ್ಲಿ ಬೆಲೆ ರೂ. 48,970 ರೂ. ಆಗಿದೆ.
ಮುಂಬೈ, ಕೋಲ್ಕತ್ತಾ ಹಾಗೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 48,550 ರೂ. ಆಗಿದೆ. ಇಂದು ಬೆಂಗಳೂರಿನಲ್ಲಿ ಬೆಳ್ಳಿ ದರ ಕೆಜಿಗೆ 200ರೂ. ಏರಿಕೆಯಾಗಿದೆ.
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.
ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್: ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 692, ರೂ. 6,920 ಹಾಗೂ ರೂ. 69,200 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 69,200 ಆಗಿದ್ದರೆ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ ಬೆಳ್ಳಿ ದರ ರೂ.64,000ಗಳಾಗಿದೆ.