Publish Date: Tue, 08 Mar 2022 (06:22 IST)
Updated Date: Tue, 08 Mar 2022 (00:15 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದು, ಇಂದು 155 ಮಂದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ.
ಹಾಗೆಯೇ ಐವರು ಕೊರೊನಾದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. 349 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಇದುವರೆಗೆ 38,99,647 ಮಂದಿ ಕೋವಿಡ್ 19 ನಿಂದ ಗುಣಮುಖರಾಗಿದ್ದಾರೆ.
ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3049 ಇದೆ. ರಾಜ್ಯದಲ್ಲಿ ಇದುವರೆಗೆ 39996 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಮರಣ ಪ್ರಮಾಣ 3.22 ಇದೆ.
ಇಂದಿನ ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 97, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 7,
ದಕ್ಷಿಣ ಕನ್ನಡ 4, ದಾವಣಗೆರೆ 0, ಧಾರವಾಡ 3, ಗದಗ 0, ಹಾಸನ 3, ಹಾವೇರಿ 1, ಕಲಬುರಗಿ 7, ಕೊಡಗು 0, ಕೋಲಾರ 2, ಕೊಪ್ಪಳ 0, ಮಂಡ್ಯ 1, ಮೈಸೂರು 14, ರಾಯಚೂರು 0,ರಾಮನಗರ 0, ಶಿವಮೊಗ್ಗ 4, ತುಮಕೂರು 1, ಉಡುಪಿ 1, ಉತ್ತರ ಕನ್ನಡ 1, ವಿಜಯಪುರ 1, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.