Publish Date: Sun, 13 Feb 2022 (06:06 IST)
Updated Date: Sun, 13 Feb 2022 (01:43 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಮುಖಗೊಂಡಿದೆ.
ಒಟ್ಟು 3,202 ಒಟ್ಟು ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 38 ಮರಣ ಪ್ರಕರಣ ದಾಖಲಾಗಿದೆ.
ಪಾಸಿಟಿವಿಟಿ ರೇಟ್ 2.95%ಕ್ಕೆ ಇಳಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 38,747ಕ್ಕೆ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಒಟ್ಟು 1,293 ಹೊಸ ಕೇಸ್ ಪತ್ತೆಯಾಗಿದ್ದು, 10 ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಒಟ್ಟು 8,988 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,24,297 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,45,903 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಕೋವಿಡ್-19 ಮರಣ ಪ್ರಮಾಣ ಶೇ.1.18% ರಷ್ಟಿದೆ. ರಾಜ್ಯದಲ್ಲಿ ಇಂದು ಒಟ್ಟು 1,12,406 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,08,534 ಸ್ಯಾಂಪಲ್ (ಆರ್ಟಿಪಿಸಿಆರ್ 81,798 + 26,736 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.