Publish Date: Sun, 08 Apr 2018 (06:42 IST)
Updated Date: Sun, 08 Apr 2018 (06:46 IST)
ಬೆಂಗಳೂರು : ಇತ್ತೀಚೆಗಷ್ಟೇ ಶಾಸಕ, ನಿರ್ಮಾಪಕ ಮುನಿರತ್ನ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ನಟ ಹುಚ್ಚ ವೆಂಕಟ್ ಅವರು ಇದೀಗ ಮುಂಬರುವ ಚುನಾವಣೆಯಲ್ಲಿ ಮುನಿರತ್ನ ಅವರ ವಿರುದ್ಧ ಕಣಕ್ಕಿಳಿಯುವುದಾಗಿ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾತನಾಡಿದ ಹುಚ್ಚ ವೆಂಕಟ್ ಅವರು,’ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ. ಚುನಾವಣೆಯ ಪ್ರಚಾರ ಕಾರ್ಯವನ್ನು 5 ದಿನಗಳಲ್ಲಿ ಆರಂಭಿಸುತ್ತೇನೆ, ಮತದಾರರು ಕೇವಲ ಕುಕ್ಕರ್ ಇತರೇ ಅಮಿಷಗಳಿಗೆ ಒಳಗಾಗಿ ಮತವನ್ನು ಮಾರಾಟ ಮಾಡಬೇಡಿ’ ಎಂದು ಹೇಳಿದರು.
ಇತ್ತೀಚೆಗೆ ಶಾಸಕ ಮುನಿರತ್ನ ತಮ್ಮ ಕ್ಷೇತ್ರದ ಮತದಾರರಿಗೆ ಕುಕ್ಕರ್ ಹಂಚಿರುವುದರ ಕುರಿತು ವಿರೋಧ ವ್ಯಕ್ತಪಡಿಸಿದ ಹುಚ್ಚ ವೆಂಕಟ್ , ಮುನಿರತ್ನ ಅವರು ಈ ಮೂಲಕ ಮತದಾರರಿಗೆ ಮೋಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು. ಆದರೆ ಇದೀಗ ಯಾವುದೇ ಪಕ್ಷಕ್ಕೆ ಸೇರದೆ ಸ್ವತಂತ್ರ ಅಭ್ಯರ್ಥಿಯಾಗಿ ಮುನಿರತ್ನ ಅವರ ವಿರುದ್ಧವೇ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ
pavithra
Publish Date: Sun, 08 Apr 2018 (06:42 IST)
Updated Date: Sun, 08 Apr 2018 (06:46 IST)