ನವದೆಹಲಿ : ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿತದಿಂದಾಗಿ ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತ ಆವರಿಸುವ ಭೀತಿ ಶುರುವಾಗಿದೆ.
ಮುಂದಿನ 24 ಗಂಟೆಗಳಲ್ಲಿ ಅಂದರೆ ಡಿಸೆಂಬರ್ 4ರಂದು ಜವಾದ್ ಚಂಡಮಾರುತ ಆಂಧ್ರಪ್ರದೇಶ ಮತ್ತ ಒಡಿಶಾಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ.
ಡಿ.4ರ ವೇಳೆಗೆ ಚಂಡಮಾರುತವು 90 ರಿಂದ 100 ಕಿ.ಮೀ. ವೇಗದಲ್ಲಿ ಒಡಿಶಾ ಕರಾವಳಿಗೆ ಅಪ್ಪಳಿಸಲಿದ್ದು, ಚಂಡಮಾರುತದಿಂದಾಗಿ ಕರಾವಳಿ ಆಂಧ್ರಪ್ರದೇಶ, ಒಡಿಶಾ ಮತ್ತು ಗಂಗಾನದಿ ಪಶ್ಚಿಮ ಬಂಗಾಳದಲ್ಲಿ ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‍ಡಿಆರ್‍ಎಫ್) ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ (8) 32 ತಂಡಗಳನ್ನು ನಿಯೋಜಿಸಿದೆ. ಭಾರತೀಯ ಸೇನೆ ಮತ್ತು ನೌಕಾಪಡೆಯ ತಂಡಗಳು ತಮ್ಮ ಹಡಗುಗಳು ಮತ್ತು ವಿಮಾನಗಳನ್ನು ಸಿದ್ಧಪಡಿಸಿದ್ದಾರೆ.
ಜವಾದ್ ಚಂಡಮಾರುತದ ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸರ್ಕಾರವು ಸನ್ನದ್ಧವಾಗಿದೆ, 14 ಕರಾವಳಿ ಜಿಲ್ಲೆಗಳನ್ನು ಅಲರ್ಟ್ ಘೋಷಿಸಲಾಗಿದೆ ಮತ್ತು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.