ಬೆಂಗಳೂರು : ರಾಜ್ಯದಲ್ಲಿ ಸಹಕಾರಿ ಕ್ಷೇತ್ರದ ರೈತರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ಯಶಸ್ವಿನಿ ಯೋಜನೆ ಅಕ್ಟೋಬರ್ 2 ರಿಂದ ಜಾರಿಯಾಗಲಿದೆ ಅಂತ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಮಧು ಮಾದೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಮ್ಮ ಸರ್ಕಾರ ಯಶಸ್ವಿನಿ ಯೋಜನೆ ಮರು ಜಾರಿ ಮಾಡುತ್ತಿದೆ. ಸಿಎಂ ಬೊಮ್ಮಾಯಿ ಅವರು ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದಂತೆ ಯಶಸ್ವಿನಿ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದು ಹೇಳಿದರು.
ಈಗಾಗಲೇ ಯೋಜನೆಗಾಗಿ 300 ಕೋಟಿ ಹಣ ಒದಗಿಸಲಾಗಿದೆ. ಯೋಜನೆ ಅನುಷ್ಠಾನಕ್ಕೆ ಈಗಾಗಲೇ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಅಕ್ಟೋಬರ್ 2 ರಿಂದ ಯೋಜನೆ ಪ್ರಾರಂಭಕ್ಕೆ ನಿರ್ಧಾರ ಮಾಡಲಾಗಿದೆ.