ವರುಣ ಕ್ಷೇತ್ರದಲ್ಲಿ ಟಿಕೆಟ್ ನೀಡಿದಲ್ಲಿ ಸ್ಪರ್ಧಿಸಲು ಸಿದ್ದ: ವಿಜಯೇಂದ್ರ

Webdunia
ಸೋಮವಾರ, 2 ಏಪ್ರಿಲ್ 2018 (17:03 IST)
ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ವರುಣ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ವಿಚಾರ ಮಾತನಾಡಿದ ಮಾಜಿ ಸಿಎಂ ಬಿಎಸ್ ವೈ ಪುತ್ರ ವಿಜೆಯೇಂದ್ರ, ಈ ಬಗ್ಗೆ ವರುಣ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಅಭಿಪ್ರಾಯಕ್ಕೆ ಬೆಲೆ ಕೊಡ್ತಿನಿ. ಬಿಜೆಪಿ ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.
ವರುಣ ಕ್ಷೇತ್ರದ ಅಧಿಕೃತ ಅಭ್ಯರ್ಥಿ ಅಂತ ಇನ್ನೂ ಘೋಷಣೆಯಾಗಿಲ್ಲ. ಇವತ್ತು ವರುಣ ಕ್ಷೇತ್ರದ ಪಕ್ಷದ ಕಾರ್ಯಕರ್ತರ ಸಭೆ ನಡೆಸಿ ಅವರ ಅಭಿಪ್ರಾಯ ಪಡೆಯುತ್ತೇನೆ. ನಾನು ಕೂಡ ಕೊಳ್ಳೇಗಾಲದಲ್ಲಿ ಎರಡು ವರ್ಷಗಳ ಕಾಲ ವಿದ್ಯಾಭ್ಯಾಸ ಮಾಡಿದ್ದೆನೆ ಎಂದರು.
 
ಸಿಎಂ ಸಿದ್ದರಾಮಯ್ಯ ಅವರು ಹೇಳಿರೋದು ಸರಿಯಿದೆ ನನಗೆ ಕ್ಷೇತ್ರದ ಬಗ್ಗೆ ಅಷ್ಟು ಅನುಭವವಿಲ್ಲ. ಆದರೆ ನಮ್ಮ ಕಾರ್ಯಕರ್ತರ ಸಲಹೆ ನಡೆಯುತ್ತೇನೆ. ನನಗೆ ಚುನಾವಣಾ ರಾಜಕೀಯ ಹೊಸದಿರಬಹುದು ಆದರೆ ರಾಜಕೀಯ ಅಲ್ಲ. ನನ್ನ ಪೂಜ್ಯ ತಂದೆಯವರ ಜತೆ ಕಳೆದ 10 ವರ್ಷಗಳಿಂದ ರಾಜಕೀಯವನ್ನು ಹತ್ತಿರದಿಂದ ನೋಡಿದ್ದೇನೆ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.
 
ಅಣ್ಣ ರಾಘವೇಂದ್ರ ಶಿವಮೊಗ್ಗದಲ್ಲಿ ಮಾಜಿ ಸಿಎಂ ವಿರುದ್ಧ ನಿಂತು ಎಂಪಿಯಾಗಿದ್ದಾರೆ. 150 ಸೀಟ್ ಗೆಲ್ಲುವ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೊಂದೆ ನಮ್ಮ ಉದ್ದೇಶ. ಯಾರು ಎಲ್ಲಿ ಸ್ಪರ್ಧಿಸುತ್ತಾರೆ ಅನ್ನೋದು ಮುಖ್ಯವಲ್ಲ, ಈ ಬಾರಿ ವರುಣದಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ಮೈಸೂರಿನಲ್ಲಿ ಬಿಎಸ್ ವೈ ಕಿರಿಯ ಪುತ್ರ ಬಿ ವೈ ವಿಜೆಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments