Publish Date: Fri, 27 May 2022 (09:44 IST)
Updated Date: Fri, 27 May 2022 (09:46 IST)
ಬೆಂಗಳೂರು : ಇನ್ಮುಂದೆ ದೌರ್ಜನ್ಯದಿಂದ ಮೃತಪಟ್ಟ ಎಸ್ಸಿ-ಎಸ್ಟಿಗೆ ಸೇರಿದ ಕುಟುಂಬ ಸದಸ್ಯರಿಗೂ ಸರ್ಕಾರಿ ನೌಕರಿ ನೀಡುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ.
ಇತ್ತೀಚೆಗಷ್ಟೇ ಕ್ಯಾಬಿನೆಟ್ ನಲ್ಲಿ ಅನುಮೋದನೆ ಪಡೆದಿದ್ದ ನಿಯಮವನ್ನು ಅನುಷ್ಠಾನಗೊಳಿಸುವಂತೆ ಆದೇಶಿಸಿದೆ.
ಮೃತರ ಕುಟುಂಬದ ಸದಸ್ಯರೊಬ್ಬರಿಗೆ ಅನುಕಂಪ ಆಧಾರದಲ್ಲಿ ಉದ್ಯೋಗ ನೀಡುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.