Select Your Language

Notifications

webdunia
webdunia
webdunia
webdunia

ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ಏರಿಕೆ!

ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ಏರಿಕೆ!
ಬೆಂಗಳೂರು , ಶುಕ್ರವಾರ, 17 ಜೂನ್ 2022 (08:00 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ಇಂದು ಮತ್ತಷ್ಟು ಏರಿಕೆ ಕಂಡಿದೆ.
 
ಇಂದು ಒಟ್ಟು 833 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಜೊತೆಗೆ ಇಂದು ಕೂಡ ಏಕೈಕ ಮರಣ ಪ್ರಕರಣ ವರದಿಯಾಗಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 3.47ಕ್ಕೆ ಏರಿಕೆ ಕಂಡಿದೆ.

ಬೆಂಗಳೂರು ನಗರದಲ್ಲಿ ಇಂದು ಒಟ್ಟು 791 ಕೇಸ್ ಪತ್ತೆಯಾಗಿದ್ದು, ಈ ಮೂಲಕ ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4,199ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ಮೈಸೂರಿನಲ್ಲಿ ದಾಖಲಾದ 12 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ.

ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,371ಕ್ಕೆ ತಲುಪಿದೆ. ಬೆಂಗಳೂರು ಹೊರತು ಪಡಿಸಿ ಉಳಿದಂತೆ 10 ಜಿಲ್ಲೆಗಳಲ್ಲಿ 42 ಕೇಸ್ ಮತ್ತು 19 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಏಕೈಕ ಮರಣ ಪ್ರಕರಣ ದಾಖಲಾಗಿದೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 791, ಮೈಸೂರು 12, ದಕ್ಷಿಣಕನ್ನಡ 6, ಉಡುಪಿ 5, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಬಳ್ಳಾರಿ ತಲಾ 4, ಧಾರವಾಡ 3, ಬೆಳಗಾವಿ 2, ರಾಮನಗರ ಮತ್ತು ಉತ್ತರಕನ್ನಡದಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 833 ಕೇಸ್ ವರದಿಯಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ರೈಲಿನ 2 ಬೋಗಿಗೆ ಬೆಂಕಿ!