Webdunia - Bharat's app for daily news and videos

Install App

ಪಾರ್ಕಿನ್ಸನ್ ರೋಗಿಗಳ ಪ್ರಮಾಣ 2030 ರ ವೇಳೆಗೆ ಹೆಚ್ಚಳ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Webdunia
ಭಾನುವಾರ, 25 ಜುಲೈ 2021 (09:47 IST)
ಬೆಂಗಳೂರು, ಜುಲೈ 24: ಪಾರ್ಕಿನ್ಸನ್ ರೋಗಕ್ಕೆ ಒಳಗಾಗುವವರ ಪ್ರಮಾಣ 2030 ರ ವೇಳೆಗೆ ಶೇ.200-300 ರಷ್ಟು ಹೆಚ್ಚಾಗಲಿದ್ದು, ಈ ದಿಕ್ಕಿನಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
 

ಕಿಂಗ್ಸ್ ಕಾಲೇಜ್ ಲಂಡನ್ ಮತ್ತು ಪಾರ್ಕಿನ್ಸನ್ಸ್ ರಿಸರ್ಚ್ ಅಲಯನ್ಸ್ ಆಫ್ ಇಂಡಿಯಾ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ದೇಶದಲ್ಲಿ ಒಂದು ಲಕ್ಷ ಜನರಲ್ಲಿ 350-400 ಜನರು ಪಾರ್ಕಿನ್ಸನ್ ರೋಗಕ್ಕೆ ಒಳಗಾಗುತ್ತಿದ್ದಾರೆ. ಈ ಪ್ರಮಾಣ 2030 ರ ವೇಳೆಗೆ ಶೇ.200-300 ರಷ್ಟು ಹೆಚ್ಚಲಿದೆ. ಒಟ್ಟು ಜನಸಂಖ್ಯೆಯ ಶೇ.1 ರಷ್ಟು ಜನರು ಈ ರೋಗದಿಂದ ಸಮಸ್ಯೆಗೆ ಒಳಗಾಗಲಿದ್ದಾರೆ. ಕೆಸಿಎಲ್-ಪಿಎಆರ್ ಐ ಕಾರ್ಯಕ್ರಮವು ಪಾರ್ಕಿನ್ಸನ್ ರೋಗಕ್ಕೆ ಸಂಬಂಧಿಸಿದ ಸಂಶೋಧನೆಗೆ ನೆರವಾಗಲಿದೆ ಎಂದರು.
ನ್ಯೂರೋ ಡಿಜನರೇಟಿವ್ ಕಾಯಿಲೆಗಳಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿರುವುದಕ್ಕೆ ನಿಮ್ಹಾನ್ಸ್ ಗುರುತಿಸಿಕೊಂಡಿದೆ. ಪಾರ್ಕಿನ್ಸನ್ ರೋಗಕ್ಕೆ ಸಂಬಂಧಪಟ್ಟಂತೆ ನಿಮ್ಹಾನ್ಸ್ ಪಿಎಆರ್ಐನ ಇತರೆ ಕೇಂದ್ರಗಳೊಂದಿಗೆ ಸಂಶೋಧನಾ ಕಾರ್ಯಗಳನ್ನು ಕೈಗೊಳ್ಳಲಿದೆ. ಅಕಾಡೆಮಿಕ್ ತರಬೇತಿ ಹಾಗೂ ಸಂಶೋಧನಾ ವಲಯದಲ್ಲಿ ಕೆಸಿಎಲ್-ಪಿಎಆರ್ಐ ಜೊತೆ ಕಾರ್ಯನಿರ್ವಹಿಸುವ ಅವಕಾಶಗಳನ್ನು ರಾಜ್ಯ ಸರ್ಕಾರ ಪರಿಶೀಲಿಸಲಿದೆ ಎಂದು ಹೇಳಿದರು.
ಪಾರ್ಕಿನ್ ಸನ್ ಹಾಗೂ ಇತರೆ ನ್ಯೂರೋ ಡಿಜನರೇಟಿವ್ ರೋಗಕ್ಕೆ ಸಂಬಂಧಿಸಿದಂತೆ ಪ್ರೊ.ರೇ ತಂಡ ಕೈಗೊಂಡ ಸಂಶೋಧನಾ ಚಟುವಟಿಕೆಗಳಿಗೆ ಅಭಿನಂದಿಸುತ್ತೇನೆ. ಎರಡೂ ಸಂಸ್ಥೆಗಳ ಈ ಸಹಯೋಗದ ಕೆಲಸ ಅಕಾಡೆಮಿಕ್ ವೇದಿಕೆ ಸೃಷ್ಟಿಸಲು ಹಾಗೂ ಕೌಶಲ್ಯಯುತ ಸಂಶೋಧಕರನ್ನು ನಿರ್ಮಿಸಲು ಸಹಕಾರಿಯಾಗಲಿದೆ. ಬೆಂಗಳೂರಿನಲ್ಲಿ ತರಬೇತಿ ಕಾಯಾರ್ಗಾರ ಆಯೋಜಿಸಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.
ಪಾರ್ಕಿನ್ಸನ್ ರೋಗಿಗಳ ಚಿಕಿತ್ಸೆಗೆ ಹಣ ಸಂಗ್ರಹಿಸಲು ಕೆಸಿಎಲ್ ನಲ್ಲಿ ಆಯೋಜಿಸಿದ್ದ ವಾರ್ಷಿಕ ಚಾರಿಟಿ ಕ್ರಿಕೆಟ್ ಪಂದ್ಯದಲ್ಲಿ ಹಿಂದೊಮ್ಮೆ ಭಾಗವಹಿಸಿದ್ದೆ. ಹಾಗೆಯೇ ಕೆಸಿಎಲ್ ನ ಪಾರ್ಕಿನ್ಸನ್ ಸೆಂಟರ್ ಆಫ್ ಎಕ್ಸಲೆನ್ಸ್ ಗೂ ಭೇಟಿ ನೀಡಿದ್ದೆ ಎಂದು ಸಚಿವರು ಇದೇ ವೇಳೆ ನೆನಪಿಸಿಕೊಂಡರು

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments