ಆರೋಪ ನಿರಾಕರಿಸಿದ ಭಾರತ!?

Webdunia
ಗುರುವಾರ, 3 ಮಾರ್ಚ್ 2022 (10:20 IST)
ನವದೆಹಲಿ : ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂಬ ರಷ್ಯಾದ ಗಂಭೀರ ಆರೋಪವನ್ನು ಭಾರತ ನಿರಾಕರಿಸಿದೆ.

ರಷ್ಯಾ ಆರೋಪ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ವಿದ್ಯಾರ್ಥಿಗಳ ಒತ್ತೆಯಾಳಾಗಿರುವ ಕುರಿತು ಇದುವರೆಗೆ ಯಾವುದೇ ವರದಿಗಳೂ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಖಾರ್ಕೀವ್ನಿಂದ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ದೇಶದ ಪಶ್ಚಿಮ ಭಾಗದ ಕಡೆಯಿಂದ ವಿದ್ಯಾರ್ಥಿಗಳನ್ನು ಹೊರಗೆ ಸಾಗಿಸಲು ವಿಶೇಷ ರೈಲುಗಳ ವ್ಯವಸ್ಥೆ ಕಲ್ಪಿಸುವಂತೆ ನಾವು ಉಕ್ರೇನ್ ಅಧಿಕಾರಿಗಳ ನೆರವು ಕೋರಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ತಿಳಿಸಿದ್ದಾರೆ. 

ಉಕ್ರೇನ್ನಲ್ಲಿನ ನಮ್ಮ ರಾಯಭಾರ ಕಚೇರಿಯು ಅಲ್ಲಿರುವ ಭಾರತೀಯ ಪ್ರಜೆಗಳ ಜೊತೆ ನಿರಂತರ ಸಂಪರ್ಕದಲ್ಲಿದೆ. ಉಕ್ರೇನ್ ಅಧಿಕಾರಿಗಳ ಸಹಕಾರದೊಂದಿಗೆ ಅನೇಕ ವಿದ್ಯಾರ್ಥಿಗಳು ನಿನ್ನೆ ಖಾರ್ಕೀವ್ ತೊರೆದಿದ್ದಾರೆ.

ರಷ್ಯಾ, ರೊಮೇನಿಯಾ, ಪೋಲ್ಯಾಂಡ್, ಹಂಗೆರಿ, ಸ್ಲೊವೇಕಿಯಾ ಮತ್ತು ಮಾಲ್ಡೋವಾ ಸೇರಿದಂತೆ ಈ ಪ್ರದೇಶದ ದೇಶಗಳ ಜೊತೆಗೆ ಪರಿಣಾಮಕಾರಿಯಾಗಿ ಸಮನ್ವಯ ಸಾಧಿಸುತ್ತಿದ್ದೇವೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡ ಎಂದರೆ ಹೀಗಿರಬೇಕು.. ಆಗ ತಾನೇ ಹುಟ್ಟಿದ ಮಗುವನ್ನು ಬಿಟ್ಟು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ Video

ಇವರೆಂಥಾ ಹೆತ್ತವರು..ಯ:ಕಶ್ಚಿತ್ ಚರಂಡಿಗೆ ಬಿದ್ದ ತಟ್ಟೆಗಾಗಿ ಮಗುವಿನ ಜೀವವನ್ನೇ ಪಣಕ್ಕಿಟ್ಟರು Video

ಜಿರಳೆ ಪಾರ್ಟಿ ಪ್ರತಿಭಟನೆ ದಕ್ಷಿಣ ಭಾರತದಲ್ಲಿ ಯಾಕೆ ಪಾಪ್ಯುಲರ್ ಆಗಿಲ್ಲ: ಇಲ್ಲಿದೆ ಕಾರಣ

ಆನ್ ಲೈನ್ ಮೀಟಿಂಗ್ ನಲ್ಲಿ ಎಡವಟ್ಟು: ಸೀನಿಯರ್ ನ್ನೇ ಹೀಗೆ ಕರೆಯೋದಾ ಮಹಿಳೆ: ಸಖತ್ ಫನ್ನಿ video

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಮುಂದಿನ ಸುದ್ದಿ
Show comments