ಔಷಧ, ಅಗತ್ಯವಸ್ತುಗಳ ನೆರವು ನೀಡಲಿರುವ ಭಾರತ

Webdunia
ಮಂಗಳವಾರ, 1 ಮಾರ್ಚ್ 2022 (08:40 IST)
ಯುದ್ಧಭೂಮಿಯಾಗಿರುವ ಉಕ್ರೇನ್ನಲ್ಲಿ  ಸಿಲುಕಿರುವ ಭಾರತದ ನೆರೆಹೊರೆಯ ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳ ಪ್ರಜೆಗಳನ್ನು ಸ್ಥಳಾಂತರ ಮಾಡಿ ರಕ್ಷಿಸಲು,

 ಆ ರಾಷ್ಟ್ರಗಳಿಗೆ ನಾವು ಅಗತ್ಯ  ಸಹಾಯ ಮಾಡಲಿದ್ದೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ  ಸೋಮವಾರ ಸಂಜೆ ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಹೇಳಿದ್ದಾಗಿ ವರದಿಯಾಗಿದೆ. ಅಷ್ಟೇ ಅಲ್ಲ, ಉಕ್ರೇನ್ನಿಂದ ಭಾರತಕ್ಕೆ ಮಾನವೀಯ ನೆರವು ನೀಡಲಾಗುವುದು ಎಂದೂ ಪ್ರಧಾನಿ ಹೇಳಿದ್ದಾರೆ. 

ಅಷ್ಟೇ ಅಲ್ಲ, ಅವರು ಈಗಾಗಲೇ ರೊಮೇನಿಯಾದ ಪ್ರಧಾನಮಂತ್ರಿ ಎಚ್.ಇ.ನಿಕೋಲೇ-ಐಯೋನೆಲ್ ಸಿಯುಕಾ ಮತ್ತು ಸ್ಲೋವಕ್ ರಿಪಬ್ಲಿಕ್ ಪ್ರಧಾನಿ ಎಡ್ವರ್ಡ್ ಹೆಗೆರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರ ಮಾಡಲು ಎಲ್ಲ ರೀತಿಯ ಅನುಕೂಲ ಮಾಡಿಕೊಟ್ಟಿದ್ದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಉಕ್ರೇನ್ಗೆ ಮಾನವೀಯ ನೆರವು ಕಳಿಸುವ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಭಾಗ್ಚಿ, ಭಾರತದ ಉಕ್ರೇನ್ಗೆ ಔಷಧಗಳು ಮತ್ತು ಇನ್ನಿತರ ಅಗತ್ಯ ವಸ್ತುಗಳನ್ನು ಕಳಿಸಲಿದೆ. ಈ ಬಗ್ಗೆ ಭಾರತದಲ್ಲಿರುವ ಉಕ್ರೇನ್ ರಾಯಭಾರಿ ಇಗೋರ್ ಪೊಲಿಖಾ, ಕೇಂದ್ರ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಅವರ ಬಳಿ ಮನವಿ ಮಾಡಿದ್ದರು.

ಮಾನವೀಯ ನೆರವು ನೀಡುವುದಾಗಿ ಭಾರತ ಸರ್ಕಾರ ಹೇಳಿದ್ದರೂ ಕೂಡ ಯಾವ್ಯಾವ ಸಮಯದಲ್ಲಿ ಪೂರೈಕೆಯಾಗಲಿದೆ ಎಂಬ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ. ಉಕ್ರೇನ್ನಲ್ಲಿ ಅಗತ್ಯ ಹೆಚ್ಚಿರುವ ಕಾರಣ ತ್ವರಿತವಾಗಿ ಈ ಕಾರ್ಯ ನಡೆಯಲಿದೆ. ಉಕ್ರೇನ್ ತನ್ನ ಅಗತ್ಯಗಳ ಪಟ್ಟಿಯನ್ನು ಭಾರತಕ್ಕೆ ನೀಡಿದೆ ಎಂದೂ ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments