Publish Date: Mon, 07 Mar 2022 (08:23 IST)
Updated Date: Mon, 07 Mar 2022 (09:09 IST)
ರಾಮಲ್ಲಾ: ಪ್ಯಾಲೆಸ್ತೀನ್ನಲ್ಲಿದ್ದ ಭಾರತೀಯ ರಾಯಭಾರಿ ಮುಕುಲ್ ಆರ್ಯ ಅವರು ರಾಮಲ್ಲಾದಲ್ಲಿರುವ ರಾಯಭಾರ ಕಚೇರಿಯಲ್ಲಿ ಭಾನುವಾರ ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ಆರ್ಯ ರಾಯಭಾರ ಕಚೇರಿಯೊಳಗೆ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿನ ಬಗ್ಗೆ ಪ್ಯಾಲೇಸ್ಟಿನಿಯನ್ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ ಪ್ಯಾಲೆಸ್ಟೈನ್ ಮಾಧ್ಯಮಗಳು ವರದಿ ಮಾಡಿವೆ.
ಆರ್ಯ ಅವರ ನಿಧನಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ಆಘಾತ ವ್ಯಕ್ತಪಡಿಸಿದ್ದಾರೆ. “ರಾಮಲ್ಲಾದಲ್ಲಿ ಭಾರತದ ಪ್ರತಿನಿಧಿಯಾದ ಮುಕುಲ್ ಆರ್ಯ ಅವರ ನಿಧನದ ಬಗ್ಗೆ ತಿಳಿದು ತೀವ್ರ ಆಘಾತವಾಗಿದೆ. ಅವರು ಪ್ರತಿಭಾವಂತ ಅಧಿಕಾರಿಯಾಗಿದ್ದರು” ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.