ಬೆಂಗಳೂರು : ಉತ್ತರ ಮತ್ತು ಮಧ್ಯ ಕರ್ನಾಟಕದ 11 ಜಿಲ್ಲೆಗಳಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ವಹಿವಾಟು ಬಂದ್ಆಗುವ ಸಾಧ್ಯತೆಯಿದೆ.
ಬೆಳಗಾವಿ ವಾಣಿಜ್ಯೋದ್ಯಮ ಸಂಸ್ಥೆ, ಕಲ್ಯಾಣ ಕರ್ನಾಟಕ ವಾಣಿಜ್ಯ ಉದ್ಯಮ ಸೇರಿದಂತೆ ಉತ್ತರ ಕರ್ನಾಟಕ ಭಾಗದ 25 ವಾಣಿಜ್ಯೋದ್ಯಮ ಸಂಸ್ಥೆಗಳು ಬಂದ್ಗೆ ಬೆಂಬಲ ವ್ಯಕ್ತಪಡಿಸಿವೆ. ಇಂದು ಜಿಲ್ಲಾ ಕೇಂದ್ರಗಳಲ್ಲಿ ಈ ಸಂಘಟನೆಗಳ ಸದಸ್ಯರು ಪ್ರತಿಭಟಿಸಲಿದ್ದಾರೆ.
ಈ ಬಂದ್ಗೆ ಕರ್ನಾಟಕ ಕೈಗಾರಿಕಾ ಹಾಗೂ ವಾಣಿಜ್ಯ ಮಹಾಸಂಘ (ಎಫ್ಕೆಸಿಸಿಐ) ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದ ವಿವಿಧ ವಾಣಿಜ್ಯ ಸಂಘಟನೆಗಳು ಬೆಂಬಲ ನೀಡದಿರಲು ನಿರ್ಧರಿಸಿದೆ. ಈ ಕಾರಣದಿಂದ ಬೆಂಗಳೂರು ಮತ್ತು ಹಳೆ ಮೈಸೂರು ಭಾಗದಲ್ಲಿ ಎಂದಿನಂತೆ ವಾಣಿಜ್ಯ ವಹಿವಾಟು, ಕೈಗಾರಿಕೆಗಳು ಕೆಲಸ ಮಾಡಲಿವೆ.
ಯಾವ ಜಿಲ್ಲೆಗಳಲ್ಲಿ ಬಂದ್?
ಧಾರವಾಡ, ಬೀದರ್, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಹುಬ್ಬಳ್ಳಿ, ವಿಜಯನಗರ, ಮೈಸೂರು, ಬಳ್ಳಾರಿ, ಯಾದಗಿರಿ, ಹಾವೇರಿ.