Select Your Language

Notifications

webdunia
webdunia
webdunia
webdunia

ಭಾರತದಲ್ಲಿ 24ಗಂಟೆಯಲ್ಲಿ ಏರಿಗೆ ಕಂಡ ಸೋಂಕು! ಎಷ್ಟಿದೆ?

ಭಾರತದಲ್ಲಿ 24ಗಂಟೆಯಲ್ಲಿ ಏರಿಗೆ ಕಂಡ ಸೋಂಕು! ಎಷ್ಟಿದೆ?
ನವದೆಹಲಿ , ಗುರುವಾರ, 6 ಜನವರಿ 2022 (10:08 IST)
ಭಾರತದಲ್ಲಿ ಇಂದು 24 ಗಂಟೆಯಲ್ಲಿ ಬರೋಬ್ಬರಿ 90,928 ಕೊರೊನಾ ಕೇಸ್ ಗಳು ದಾಖಲಾಗಿದ್ದು, ನಿನ್ನೆಗಿಂತಲೂ ಇಂದು ಶೇ.56.5ರಷ್ಟು ಅಧಿಕವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಈ ಮೂಲಕ ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3,51,09,286 ಕ್ಕೆ ಏರಿಕೆಯಾಗಿದೆ. ಹಾಗೇ 24ಗಂಟೆಯಲ್ಲಿ 325 ಜನರು ಮೃತಪಟ್ಟಿದ್ದಾರೆ. ಅಲ್ಲಿಗೆ ದೇಶದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 4,82,876ಕ್ಕೆ ಏರಿಕೆಯಾಗಿದೆ.

ದಿನದ ಪಾಸಿಟಿವಿಟಿ ದರ ಶೇ.6.43ಕ್ಕೆ ಏರಿಕೆಯಾಗಿದೆ. ಹಾಗೇ, ಸಕ್ರಿಯ ಪ್ರಕರಣಗಳ ಸಂಖ್ಯೆ 2,85,401ಕ್ಕೆ ತಲುಪಿದೆ.

ದೇಶದಲ್ಲಿ ವಾರದ ಪಾಸಿಟಿವಿಟಿ ದರ ಶೇ.3.47ರಷ್ಟಿದೆ. 24 ಗಂಟೆಯಲ್ಲಿ 19,206ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲಿಗೆ ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 3,43,41,009ಕ್ಕೆ ತಲುಪಿದೆ.

ಆದರೆ ಒಂದು ದಿನದಲ್ಲಿ ಪತ್ತೆಯಾಗುವ ಕೊವಿಡ್ 19 ಹೊಸ ಸೋಂಕಿತರ ಸಂಖ್ಯೆಗೂ, ಚೇತರಿಸಿಕೊಂಡು ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆಗೂ ಅಜಗಜಾಂತರ ವ್ಯತ್ಯಾಸ ಇದೆ.  ಒಟ್ಟಾರೆ ದಾಖಲಾದ 90 ಸಾವಿರಕ್ಕೂ ಅಧಿಕ ಪ್ರಕರಣದಲ್ಲಿ 26,538 ಕೊರೊನಾ ಕೇಸ್ಗಳು ಮಹಾರಾಷ್ಟ್ರದಲ್ಲಿಯೇ ದಾಖಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಯಾಗಿ 11 ವರ್ಷವಾದರೂ ಫಸ್ಟ್ ನೈಟ್ ಭಾಗ್ಯ ಕೂಡಿ ಬಂದಿಲ್ಲ! ಮುಂದೇನಾಯ್ತು?