Select Your Language

Notifications

webdunia
webdunia
webdunia
webdunia

ಬೆಸ್ಕಾಂನಿಂದ ಡಿಜಿಟಲ್ ಮೀಟರ್ ಅಳವಡಿಕೆ

ಬೆಸ್ಕಾಂನಿಂದ ಡಿಜಿಟಲ್ ಮೀಟರ್ ಅಳವಡಿಕೆ
ಬೆಂಗಳೂರು , ಮಂಗಳವಾರ, 26 ಜುಲೈ 2022 (14:08 IST)
ಬೆಂಗಳೂರು : ಬೆಸ್ಕಾಂನ ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವಲಯದಲ್ಲಿನ (ಬಿಎಂಎಝಡ್) ಗ್ರಾಹಕರಿಗೆ ತಾವು ಬಳಸುವ ವಿದ್ಯುತ್ ಪ್ರಮಾಣದ ನಿಖರ ಮಾಹಿತಿ ತಿಳಿದುಕೊಳ್ಳಲು ಅನುಕುಲವಾಗುವ,

ಡಿಎಲ್ಎಂಎಸ್ ಸ್ಟ್ಯಾಟಿಕ್ (ಡಿವೈಸ್ ಲ್ಯಾಂಗ್ವೇಜ್ ಮೆಸೇಜ್ ಸ್ಪೆಸಿಫಿಕೇಷನ್) ಡಿಜಿಟಲ್ ಮಾಪನಗಳನ್ನು ನೀಡಲಾಗುತ್ತಿದೆ.

ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವ್ಯಾಪ್ತಿಯಲ್ಲಿರುವ 17,68,000 ಎಲೆಕ್ಟ್ರೊ ಮೆಕಾನಿಕಲ್ ಮೀಟರ್ಗಳನ್ನು ಡಿಎಲ್ಎಂಎಸ್ ಸ್ಟ್ಯಾಟಿಕ್ ಡಿಜಿಟಲ್ ಮೀಟರ್ಗೆ ಬದಲಾವಣೆ ಮಾಡುವ ಕಾರ್ಯ ಜುಲೈ ತಿಂಗಳಲ್ಲಿ ಆರಂಭಗೊಂಡಿದೆ.

ರಾಜಾಜಿನಗರ, ರಾಜರಾಜೇಶ್ವರಿನಗರ, ಇಂದಿರಾನಗರ ಮತ್ತು ವೈಟ್ ಫೀಲ್ಡ್ ವಿಭಾಗಗಳಲ್ಲಿ ಈಗಾಗಲೇ 16,000 ಸಿಂಗಲ್ ಫೇಸ್ ಮತ್ತು 3 ಫೇಸ್ ಡಿಜಿಟಲ್ ಮಾಪನಗಳನ್ನು ಅಳವಡಿಸಲಾಗಿದೆ. ಡಿಜಿಟಲ್ ಮೀಟರ್ ಬದಲಾವಣೆ ಕಾರ್ಯ ಭರದಿಂದ ಸಾಗಿದ್ದು ಪ್ರತಿನಿತ್ಯ 700 ರಿಂದ 900 ಮೀಟರ್ಗಳನ್ನು ಅಳವಡಿಸಲಾಗುತ್ತಿದೆ.

ಬೆಸ್ಕಾಂ ಒಂದು ವಿಭಾಗದಲ್ಲಿ ಮೀಟರ್ ಅಳವಡಿಕೆ ಕಾರ್ಯ ಪೂರ್ಣಗೊಂಡ ನಂತರವೇ ಇನ್ನೊಂದು ವಿಭಾಗದಲ್ಲಿ ಅಳವಡಿಕೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ.

2024ರ ವೇಳೆಗೆ 17,68,000 ಎಲೆಕ್ಟ್ರೋ ಮೆಕಾನಿಕಲ್ ಮೀಟರ್ಗಳನ್ನು ಡಿಜಿಟಲ್ ಮೀಟರ್ಗೆ ಬದಲಿಸುವ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕ (ಮಾಪಕ ಮತ್ತು ವಾಣಿಜ್ಯ) ಪಿ.ರಂಗಸ್ವಾಮಿ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಗಳನ್ನ ಕುಡುಗೋಲಿನಿಂದ ಕೊಚ್ಚಿ ಕೊಂದ ತಂದೆ!