Select Your Language

Notifications

webdunia
webdunia
webdunia
webdunia

ಗರ್ಭಿಣಿಯರ ಮೇಲೆ ತೀವ್ರ ನಿಗಾ?

ಗರ್ಭಿಣಿಯರ ಮೇಲೆ ತೀವ್ರ ನಿಗಾ?
ಬೆಂಗಳೂರು , ಸೋಮವಾರ, 19 ಡಿಸೆಂಬರ್ 2022 (07:49 IST)
ರಾಯಚೂರು : ಜಿಲ್ಲೆಯಲ್ಲಿ ಝಿಕಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಚಿವ ಶಂಕರ್ ಪಾಟೀಲ್ ಬಿ.ಮುನೇನಕೊಪ್ಪ ರಾಯಚೂರಿನಲ್ಲಿಂದು ಕೇಂದ್ರ, ರಾಜ್ಯ ತಜ್ಞರ ತಂಡ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಸಚಿವ ಶಂಕರ್ ಪಾಟೀಲ್ ಬಿ.ಮುನೇನಕೊಪ್ಪ, ಪ್ರಕರಣ ಪತ್ತೆಯಾದ ಕೂಡಲೇ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 151 ಗರ್ಭಿಣಿಯರ ಮೇಲೆ ನಿಗಾ ಇಡಲಾಗಿದೆ.

21 ಗರ್ಭಿಣಿಯರ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವೈರಸ್ ಪತ್ತೆಯಾದ ತಾಲೂಕಿನ 57 ಗರ್ಭಿಣಿಯರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಸಂಗ್ರಹಿಸಿದ ನೀರನ್ನು ಹೆಚ್ಚುದಿನ ಇಡದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ