Publish Date: Wed, 10 May 2023 (09:58 IST)
Updated Date: Wed, 10 May 2023 (10:00 IST)
ಇಮ್ರಾನ್ ಖಾನ್ ಬಂಧನದ ಬಳಿಕ ಪಾಕಿಸ್ತಾನದ ದೂರಸಂಪರ್ಕ ಪ್ರಾಧಿಕಾರ ದೇಶಾದ್ಯಂತ ಮೊಬೈಲ್ ಬ್ರಾಡ್ಬ್ಯಾಂಡ್ ಸೇವೆಗಳನ್ನು ಸ್ಥಗಿತಗೊಳಿಸಿದೆ.
ಮಾತ್ರವಲ್ಲದೇ ಟ್ವಿಟ್ಟರ್, ಫೇಸ್ಬುಕ್ ಹಾಗೂ ಯೂಟ್ಯೂಬ್ಗೂ ನಿರ್ಬಂಧಿಸಲಾಗಿದೆ. ಇಸ್ಲಾಮಾಬಾದ್ ಮಾತ್ರವಲ್ಲದೇ ರಾವಲ್ಪಿಂಡಿ, ಲಾಹೋರ್, ಕರಾಚಿ, ಗುಜ್ರಾನ್ವಾಲಾ, ಫೈಸಲಾಬಾದ್, ಮುಲ್ತಾನ್, ಪೇಶಾವರ್ ಮತ್ತು ಮರ್ದಾನ್ನಲ್ಲಿಯೂ ಪ್ರತಿಭಟನೆಗಳು ಪ್ರಾರಂಭವಾಗಿರುವುದಾಗಿ ವರದಿಗಳು ತಿಳಿಸಿವೆ.