Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಹೆಚ್ಚಾಗುತ್ತಾ ಕೋವಿಡ್ ಅಬ್ಬರ?

ರಾಜ್ಯದಲ್ಲಿ ಹೆಚ್ಚಾಗುತ್ತಾ ಕೋವಿಡ್ ಅಬ್ಬರ?
ಬೆಂಗಳೂರು , ಸೋಮವಾರ, 8 ಆಗಸ್ಟ್ 2022 (12:02 IST)
ಬೆಂಗಳೂರು : ದೇಶದಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಒಂದೇ ಸಮನೆ ಏರುತ್ತಲೇ ಇದೆ.

ಹಲವು ರಾಜ್ಯಗಳಲ್ಲಿ ಈಗಾಗಲೇ ಪ್ರತಿದಿನ ಸಾವಿರಕ್ಕಿಂತ ಅಧಿಕ ಕೊರೋನಾ ಕೇಸ್ಗಳು ದೃಢಪಡುತ್ತಿವೆ. ಈ ಹಿನ್ನೆಲೆಯಲ್ಲಿ ಅಲರ್ಟ್  ಆಗಿರುವ ಕೇಂದ್ರ ಸರ್ಕಾರ, 7 ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.

ಕರ್ನಾಟಕ, ಮಹಾರಾಷ್ಟ್ರ , ತಮಿಳುನಾಡು, ತೆಲಂಗಾಣ, ದೆಹಲಿ ಹಾಗೂ ಒಡಿಶಾ, ಕೇರಳ ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.

ಕೋವಿಡ್ ನಿಯಂತ್ರಣ ಕ್ರಮಗಳ ಪ್ರಚಾರ ಮತ್ತು ಕೋವಿಡ್ ಏರಿಕೆಯನ್ನು ತಗ್ಗಿಸಲು ಲಸಿಕಾಕರಣ  ಅಭಿಯಾನವನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದೆ.

ಕೋವಿಡ್ ಕೇಸ್ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 7 ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ. ಕರ್ನಾಟಕ, ತಮಿಳುನಾಡು, ಕೇರಳ, ಒಡಿಶಾ, ಮಹಾರಾಷ್ಟ್ರ, ದೆಹಲಿ ಹಾಗೂ ತೆಲಂಗಾಣ ಸೇರಿದಂತೆ 7 ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

7 ರಾಜ್ಯಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಮುಂಬರುವ ಹಬ್ಬದ ದಿನಗಳು ಮತ್ತು ಜನರ ಗುಂಪುಗೂಡುವಿಕೆಯು ದೇಶದ ಅನೇಕ ಭಾಗಗಳಲ್ಲಿ ಕೋವಿಡ್ 19 ಸೇರಿದಂತೆ ಸಾಂಕ್ರಾಮಿಕ ಕಾಯಿಲೆಗಳ ಹರಡುವಿಕೆಗೆ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಪ್ರವಾಹದ ಭೀತಿ !