Select Your Language

Notifications

webdunia
webdunia
webdunia
webdunia

ಈಶ್ವರಪ್ಪ ರಾಜೀನಾಮೆಗೆ ಒತ್ತಾಯ!?

ಈಶ್ವರಪ್ಪ ರಾಜೀನಾಮೆಗೆ ಒತ್ತಾಯ!?
ಬೆಂಗಳೂರು , ಬುಧವಾರ, 13 ಏಪ್ರಿಲ್ 2022 (07:33 IST)
ಬೆಂಗಳೂರು : ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ಮೇಲೆ ವಿಪಕ್ಷಗಳು ಮುಗಿಬಿದ್ದಿವೆ.

ಕಮಿಷನ್ ಆರೋಪ, ಗುತ್ತಿಗೆದಾರರ ಸಾವು ಇಟ್ಟುಕೊಂಡು, ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಟಕ್ಕರ್ ನೀಡಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ. ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಇವತ್ತು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ.

ಗುತ್ತೆಗೆದಾರ ಸಂತೋಷ್ ಡೆತ್ನೋಟ್ನಲ್ಲಿ ಈಶ್ವರಪ್ಪ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಹೀಗಾಗಿ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರಾಜ್ಯಪಾಲರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ, ಬೆಳಗ್ಗೆ 9 ಗಂಟೆಗೆ ರಾಜಭವನಕ್ಕೆ ಕಾಂಗ್ರೆಸ್ ನಾಯಕರು ಭೇಟಿ ನೀಡಲಿದ್ದಾರೆ.

ಈಶ್ವರಪ್ಪ ತಲೆದಂಡ ಹಾಗೂ ಬಂಧನಕ್ಕೆ ಒತ್ತಾಯಿಸಿ ಬೆಂಗಳೂರಿನಲ್ಲಿನ ಈಶ್ವರಪ್ಪ ನಿವಾಸ ಹಾಗೂ ಮಂಗಳೂರಿನಲ್ಲಿ ಸಿಎಂ ಕಾರ್ಯಕ್ರಮ ನಡೆಯುತ್ತಿದ್ದ ಹೋಟೆಲ್ಗೂ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ರು. ಇಂದು ಕೂಡ ರಾಜ್ಯಾದ್ಯಂತ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. 

ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ರಾಷ್ಟ್ರಮಟ್ಟದಲ್ಲಿ ಹೋರಾಟಕ್ಕೆ ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ಪ್ರಕರಣದ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿ,

ಕರ್ನಾಟಕದಲ್ಲಿ ಬಿಜೆಪಿಯ 40% ಕಮಿಷನ್ ಸರ್ಕಾರ ತಮ್ಮದೇ ಕಾರ್ಯಕರ್ತನನ್ನು ಬಲಿ ಪಡೆದಿದೆ. ಸಂತ್ರಸ್ತ ಪ್ರಧಾನಿಗೆ ಸಲ್ಲಿಸಿದ ಮನವಿಗೆ ಉತ್ತರ ಸಿಕ್ಕಿಲ್ಲ. “ಬಿಜೆಪಿ ಕರಪ್ಷನ್ ಫೈಲ್ಸ್” ಎಂದು ಆಕ್ರೋಶ ಹೊರಹಾಕಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮಸೀದಿಗಳಿಂದ ಧ್ವನಿವರ್ಧಕ ತೆರವುಗೊಳಿಸಿ : ರಾಜ್ ಠಾಕ್ರೆ