Daily Horoscope

ಇಸ್ರೋ ನೂತನ ಅಧ್ಯಕ್ಷ ನೇಮಕ?

Webdunia
ಗುರುವಾರ, 13 ಜನವರಿ 2022 (06:56 IST)
ನವದೆಹಲಿ : ಇಸ್ರೋ  ನೂತನ ಅಧ್ಯಕ್ಷರಾಗಿ ರಾಕೆಟ್ ವಿಜ್ಞಾನಿ ಎಸ್.ಸೋಮನಾಥ್ ನೇಮಕವಾಗಿದ್ದಾರೆ.

ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರ ಅಧಿಕಾರಾವಧಿ ಮುಕ್ತಾಯಗೊಂಡಿದೆ. ಆ ಸ್ಥಾನಕ್ಕೆ ಇದೀಗ ಹಿರಿಯ ವಿಜ್ಞಾನಿ ಎಸ್.ಸೋಮನಾಥ್ ನೇಮಕಗೊಂಡಿದ್ದಾರೆ.

ಇಸ್ರೋ ಅಧ್ಯಕ್ಷರಾಗಿರುವುದರ ಜೊತೆಗೆ, ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಮತ್ತು ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಕಾಲ ಕಾರ್ಯನಿರ್ವಹಿಸಲಿದ್ದಾರೆ.

ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್  ಹಳೆಯ ವಿದ್ಯಾರ್ಥಿ ಸೋಮನಾಥ್, 1985ರಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋಗೆ ಸೇರಿದರು ಮತ್ತು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮತ್ತು ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಯೋಜನೆಗಳಲ್ಲಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ. 

ಚಂದ್ರಯಾನ-2, GSAT-9  ಯೋಜನೆ ಸೇರಿದಂತೆ ಅನೇಕ ಯೋಜನೆಗಳಲ್ಲಿ ಯಶಸ್ವಿಯಾಗಿ ಸೇವೆ ಸಲ್ಲಿಸಿರುವ ಸೋಮನಾಥ್ ಅವರನ್ನು ರಾಕೆಟ್ ವಿಜ್ಞಾನಿ ಎಂದು ಕರೆಯಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments