Select Your Language

Notifications

webdunia
webdunia
webdunia
webdunia

ಗಣೇಶ ಹಬ್ಬದಂದೇ ಇಸ್ರೋ ಗುಡ್‌ನ್ಯೂಸ್

ಗಣೇಶ ಹಬ್ಬದಂದೇ ಇಸ್ರೋ ಗುಡ್‌ನ್ಯೂಸ್
ಬೆಂಗಳೂರು , ಮಂಗಳವಾರ, 19 ಸೆಪ್ಟಂಬರ್ 2023 (07:34 IST)
ಬೆಂಗಳೂರು : ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ ಗಣೇಶ ಚತುರ್ಥಿ ಹಬ್ಬದಂದೇ ಗುಡ್ನ್ಯೂಸ್ ಕೊಟ್ಟಿದೆ. ಸೂರ್ಯ ಶಿಕಾರಿಗೆ ಭೂಮಿಯಿಂದ ಹೊರಟ ಆದಿತ್ಯ ಎಲ್-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.

ಇದೀಗ ನಿಗದಿತ ಕಕ್ಷೆ (ಐ1 ಪಾಯಿಂಟ್) ಸೇರುವುದಕ್ಕೂ ಮುನ್ನವೇ ವೈಜ್ಞಾನಿಕ ದತ್ತಾಂಶ ಕಳುಹಿಸಲು ಪ್ರಾರಂಭಿಸಿದೆ. ಈ ಕುರಿತು ಇಸ್ರೋ ತನ್ನ ಟ್ವಿಟ್ಟರ್ ಘಿ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಸೂರ್ಯನ ಬಾಹ್ಯ ವಾತಾವರಣ ಅಧ್ಯಯನಕ್ಕೆ ಕಳುಹಿಸಿರುವ ಆದಿತ್ಯ-ಎಲ್1 ವೈಜ್ಞಾನಿಕ ದತ್ತಾಂಶಗಳನ್ನ ಸಂಗ್ರಹಿಸಲು ಪ್ರಾರಂಭಿಸಿದೆ. SಖಿಇPS ಉಪಕರಣದ ಸಂವೇದಕಗಳು (ಸೆನ್ಸಾರ್ಗಳು) ಭೂಮಿಯಿಂದ 50,000 ಕಿಮೀಗಿಂತ ಹೆಚ್ಚಿನ ದೂರದಲ್ಲಿ ಸೂಪರ್-ಥರ್ಮಲ್ ಮತ್ತು ಶಕ್ತಿಯುತ ಅಯಾನುಗಳು ಮತ್ತು ಎಲೆಕ್ಟ್ರಾನ್ಗಳನ್ನು ಅಳೆಯಲು ಪ್ರಾರಂಭಿಸಿದೆ.

ಈ ಡೇಟಾವು ವಿಜ್ಞಾನಿಗಳಿಗೆ ಭೂಮಿಯ ಸುತ್ತಲಿನ ಕಣಗಳ ನಡವಳಿಕೆಯನ್ನ ವಿಶ್ಲೇಷಿಸಲು ಸಹಾಯ ಮಾಡುತ್ತದೆ. ಜೊತೆಗೆ ಅಂಕಿ ಅಂಶವು ಒಂದು ಘಟಕದಿಂದ ಸಂಗ್ರಹಿಸಲಾದ ಶಕ್ತಿಯುತ ಕಣ ಪರಿಸರದಲ್ಲಿ ವ್ಯತ್ಯಾಸಗಳನ್ನೂ ತೋರಿಸುತ್ತದೆ ಎಂದು ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಮಹತ್ವಾಕಾಂಕ್ಷಿ ಸಮುದ್ರಯಾನ : ಸಮುದ್ರದ ರಹಸ್ಯಗಳ ಅನಾವರಣ