ಬೆಂಗಳೂರು : ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಸಾಧಾರಣ ಮಳೆ ಆಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯದಲ್ಲಿ ಬೇಸಿಗೆ ಪ್ರಾರಂಭವಾಗಿದ್ದು, ಬಿಸಿಲಿನ ಧಗೆ ಹೆಚ್ಚುತ್ತಿರುವ ನಡೆವೆಯೂ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಸಮುದ್ರ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆಯಿದ್ದು, ಮಂಗಳವಾರದಿಂದ 5 ದಿನ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಮಾ.14 ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆ ಬರಲಿದ್ದು, ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ ಆಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18ರವರೆಗೆ ಮಳೆ ಆಗಲಿದೆ.