Publish Date: Sat, 24 Mar 2018 (11:53 IST)
Updated Date: Sat, 24 Mar 2018 (13:34 IST)
ಬೆಂಗಳೂರು: ಜೆಡಿಎಸ್ ನಿಂದ ಬಂಡಾಯವೆದ್ದಿದ್ದ ನಾಲ್ವರು ರೆಬಲ್ ಶಾಸಕರು ಕೊನೆಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಸ್ಪೀಕರ್ ಗೃಹ ಕಚೇರಿಗೆ ಆಗಮಿಸಿದ ನಾಲ್ವರು ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ಇವರು ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಸುದ್ದಿ ಮೊದಲೇ ಹಬ್ಬಿತ್ತು.
ಚೆಲುವರಾಯಸ್ವಾಮಿ, ಜಮೀರ್ ಅಹಮ್ಮದ್, ಭೀಮಾ ನಾಯ್ಕ್ ಮತ್ತು ಅಖಂಡ ಶ್ರೀನಿವಾಸ್ ರಾಜೀನಾಮೆ ನೀಡಿದ ಶಾಸಕರು. ಜೆಡಿಎಸ್ ಗೆ ರಾಜೀನಾಮೆ ಸಲ್ಲಿಸಿರುವ ಇವರು ಕಾಂಗ್ರೆಸ್ ಪಕ್ಷಕ್ಕೆ ರಾಹುಲ್ ಗಾಂಧಿ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ