ಗ್ರಾಹಕರಿಗೆ ಬಂಪರ್ ಪ್ಲಾನ್ ಪರಿಚಯಿಸಿದ ಜಿಯೋ : ನೆಟ್​ಫ್ಲಿಕ್ಸ್ ಫ್ರೀ

Webdunia
ಭಾನುವಾರ, 20 ಆಗಸ್ಟ್ 2023 (07:36 IST)
ಟೆಲಿಕಾಂ ಕ್ಷೇತ್ರದಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್ ಜಿಯೋ ಗ್ರಾಹಕರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸಿ ಮತ್ತಷ್ಟು ಹತ್ತಿರವಾಗುತ್ತಿದೆ. ಇದೀಗ ತನ್ನ ಪ್ರಿಪೇಯ್ಡ್ ಬಳಕೆದಾರರಿಗೆ ಎರಡು ಹೊಸ ಯೋಜನೆಗಳನ್ನು ಬಿಡುಗಡೆ ಮಾಡುವ ಮೂಲಕ ಅಚ್ಚರಿ ನೀಡಿದೆ.
 
ಅಷ್ಟೇ ಅಲ್ಲದೆ ನೆಟ್ಫ್ಲಿಕ್ಸ್ ಚಂದಾದಾರಿಕೆ ಕೂಡ ನೀಡುತ್ತಿದೆ. ಜಿಯೋದಲ್ಲಿ ಈ ಹಿಂದೆ ನೆಟ್ಫ್ಲಿಕ್ಸ್ ಚಂದಾದಾರಿಕೆ ಆಯ್ದ ಜಿಯೋ ಪೋಸ್ಟ್ಪೇಯ್ಡ್ ಮತ್ತು ಜಿಯೋ ಫೈಬರ್ ಯೋಜನೆಗಳೊಂದಿಗೆ ಮಾತ್ರ ಲಭ್ಯವಿತ್ತು.

ಇದೀಗ ಜಿಯೋ ತನ್ನ ಪ್ರಿಪೇಯ್ಡ್ ಯೋಜನೆಯಲ್ಲಿ ನೆಟ್ಫ್ಲಿಕ್ಸ್ ಸಬ್ಸ್ಕ್ರಿಪ್ಷನ್ ಅನ್ನು ಬಿಡುಗಡೆ ಮಾಡಿದೆ. ಇದರಿಂದ 400 ಮಿಲಿಯನ್ಗಿಂತಲೂ ಹೆಚ್ಚು ಜಿಯೋ ಪ್ರಿಪೇಯ್ಡ್ ಬಳಕೆದಾರರಿಗೆ ಈ ಹೊಸ ಪ್ಲಾನ್ ಮೂಲಕ ನೆಟ್ಫ್ಲಿಕ್ಸ್ ಚಂದಾದಾರಿಕೆಯನ್ನು ಪ್ರವೇಶಿಸಬಹುದು.

ಜಿಯೋ ಪರಿಚಯಿಸಿರುವ ಮೊದಲ ಪ್ರಿಪೇಯ್ಡ್ ಯೋಜನೆಯು 1099 ರೂ. ಆಗಿದೆ. ಈ ಯೋಜನೆಯು ನೆಟ್ಫ್ಲಿಕ್ಸ್ ಚಂದಾದಾರಿಕೆಯೊಂದಿಗೆ ಬರುತ್ತದೆ. ಆದರೆ ಇದು ಮೊಬೈಲ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ ಎಂಬುದನ್ನು ಗಮನಿಸಬೇಕು. ನೆಟ್ಫ್ಲಿಕ್ಸ್ ಚಂದಾದಾರಿಕೆಯೊಂದಿಗೆ, ನೀವು ಜಿಯೋ ವೆಲ್ಕಮ್ ಆಫರ್ನೊಂದಿಗೆ ಅನಿಯಮಿತ 5 G ಡೇಟಾವನ್ನು (ದಿನಕ್ಕೆ 2GB)  ಪಡೆಯುತ್ತೀರಿ. ಜೊತೆಗೆ ಅನಿಯಮಿತ ವಾಯಿಸ್ ಕರೆಯನ್ನು ಸಹ ಪಡೆಯುತ್ತೀರಿ. ಇದು 84 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments