Publish Date: Mon, 01 Oct 2018 (09:15 IST)
Updated Date: Mon, 01 Oct 2018 (09:17 IST)
ಬೆಂಗಳೂರು: ಇಡೀ ದೇಶವೇ ಬೆಚ್ಚಿ ಬೀಳಿಸುವಂತೆ ಘಟನೆಯೊಂದು ಬೆಂಗಳೂರಿನಲ್ಲಿ ನಡೆಯುವುದು ಸ್ವಲ್ಪದರಲ್ಲೇ ತಪ್ಪಿಹೋಗಿದೆ. ಟಿಬೆಟ್ ಧರ್ಮಗುರು ದಲೈಲಾಮಾ ಅವರ ಹತ್ಯೆಗೆ ಬೆಂಗಳೂರಿನಲ್ಲಿ ಸ್ಕೆಚ್ ಹಾಕಲಾಗಿತ್ತು ಎಂದು ತಿಳಿದುಬಂದಿದೆ.
ಬಾಂಗ್ಲಾದೇಶ ಮೂಲದ ಜೆಎಂಬಿ ಉಗ್ರ ಸಂಘಟನೆಯ ಉಗ್ರರು ರಾಮನಗರದಲ್ಲಿ ಕುಳಿತು ದಲೈಲಾಮ ಹತ್ಯೆಗೆ ಸಂಚು ರೂಪಿಸಿದ್ದರು ಎಂಬ ಭಯಾನಕ ಸತ್ಯ ಎನ್ ಐಎ ತನಿಖೆಯಿಂದ ಬಹಿರಂಗಗೊಂಡಿದೆ.
ಜೆಎಂಬಿ ಉಗ್ರ ಮುನೀರ್ ಎಂಬಾತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಬಿಹಾರ ರಾಜ್ಯಪಾಲರ ಜತೆಗೆ ದಲೈಲಾಮ ಭಾಗವಹಿಸಬೇಕಿದ್ದ ಕಾರ್ಯಕ್ರಮದಲ್ಲಿ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ. ಇದೀಗ ಈ ಕೃತ್ಯಕ್ಕೆ ಸ್ಕೆಚ್ ಹಾಕಿದ್ದ ಉಗ್ರ ಮುನೀರ್ ಜತೆಗೆ, ಪೈಗಂಬರ್ ಶೇಖ್, ಮುನೀರ್, ನೂರ್ ಅಸ್ಲಾಂ ಮೊಮಿನ್ ಎಂಬ ಉಗ್ರರನ್ನೂ ಬಂಧಿಸಲಾಗಿದೆ. ಇದೀಗ ಬಂಧಿತರನ್ನು ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.