Publish Date: Mon, 04 Jun 2018 (12:42 IST)
Updated Date: Mon, 04 Jun 2018 (12:46 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿಯವರನ್ನು ಖುದ್ದಾಗಿ ಭೇಟಿ ಮಾಡಲು ಬೆಂಗಳೂರಿಗೆ ಬಂದ ನಟ, ರಾಜಕಾರಣಿ ಕಮಲ್ ಹಾಸನ್ ಗೆ ನಿರಾಶೆ ಕಾದಿದೆ.
ಸಿಎಂ ಗೃಹ ಕಚೇರಿ ಕೃಷ್ಣಾಗೆ ಕಮಲ್ ಹಾಸನ್ ಈಗಾಗಲೇ ನಿಗದಿಯಂತೆ ಬಂದು ತಲುಪಿದ್ದಾರೆ. ಆದರೆ ನ್ಯಾಷನಲ್ ಕಾಲೇಜ್ ನಲ್ಲಿ ನಡೆಯುತ್ತಿರುವ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಹೋಗಿರುವ ಸಿಎಂ ಕುಮಾರಸ್ವಾಮಿ ಇನ್ನೂ ಬಾರದ ಹಿನ್ನಲೆಯಲ್ಲಿ ಕಮಲ್ ಹಾಸನ್ ಅನಿವಾರ್ಯವಾಗಿ ಕಾಯಬೇಕಾಗಿದೆ.
ಕಾವೇರಿ ವಿಚಾರ ಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲು ಕಮಲ್ ಹಾಸನ್ ಇಂದು ಸಿಎಂ ಕುಮಾರಸ್ವಾಮಿ ನಿವಾಸಕ್ಕೆ ಆಗಮಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.