Publish Date: Tue, 05 Jun 2018 (09:05 IST)
Updated Date: Tue, 05 Jun 2018 (09:10 IST)
ನವದೆಹಲಿ: ರಾಜ್ಯ ಸರ್ಕಾರದ ಸಚಿವ ಸಂಪುಟ ಸರ್ಕಸ್ ಇದೀಗ ದೆಹಲಿಗೆ ಶಿಫ್ಟ್ ಆಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಜತೆ ಚರ್ಚೆ ನಡೆಸುತ್ತಿದ್ದಾರೆ.
ವಿದೇಶದಿಂದ ದೆಹಲಿಗೆ ಮರಳಿರುವ ರಾಹುಲ್ ಜತೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸಚಿವರ ಪಟ್ಟಿ ಬಗ್ಗೆ ಅಂತಿಮ ಸುತ್ತಿನ ಮಾತುಕತೆ ನಡೆಸುತ್ತಿದ್ದಾರೆ.
ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕರಾದ ಕೃಷ್ಣ ಬೈರೇಗೌಡ, ಎಂಬಿ ಪಾಟೀಲ್ ಮುಂತಾದವರೂ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಕಾಂಗ್ರೆಸ್ ಪಾಲಿಗೆ ಬಂದಿರುವ 22 ಶಾಸಕ ಸ್ಥಾನಗಳ ಹಂಚಿಕೆ ಕಾರ್ಯ ನಡೆಯುತ್ತಿದ್ದು, ಹಿರಿಯರು, ಕಿರಿಯರು, ಪ್ರದೇಶ, ಜಾತಿವಾರು ಲೆಕ್ಕಾಚಾರಗಳನ್ನು ನಡೆಸಿ ಪಟ್ಟಿ ಅಂತಿಮಗೊಳಿಸಲಾಗುತ್ತಿದೆ.